ದಕ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇವೆಗೆ ಸನ್ನದ್ಧ

Posted By:
Subscribe to Oneindia Kannada

ಮಂಗಳೂರು, ನವೆಂಬರ್ 03 : ಖಾಸಗಿ ಆಸ್ಪತ್ರೆಗಳು ಇಂದು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಳು ಎಂದಿನಂತೆ ಸಾರ್ವಜನಿಕರಿಗೆ ಲಭ್ಯವಾಗಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

ಜಿಲ್ಲೆಯಲ್ಲಿರುವ ಎಲ್ಲಾ 65 ಪ್ರಾಥಮಿಕ ಆರೋಗ್ಯ ಕೇಂದ್ರ, 7 ಸಮುದಾಯ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಸೇವೆ ನಿರಂತರವಾಗಿ ಇಂದು ಲಭ್ಯವಿರಲಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ಮತ್ತು ಒಳರೋಗಿ ವಿಭಾಗ ಸೇರಿದಂತೆ ಶಸ್ತ್ರಚಿಕಿತ್ಸೆಗಳ ಸೌಲಭ್ಯವೂ ಸಾರ್ವಜನಿಕರಿಗೆ ಇಂದು ತೆರೆದಿರಲಿದೆ.

Govt hospitals in Dakshina Kannada get set to serve 24/7

ತಾಲೂಕು ಆಸ್ಪತ್ರೆಗಳಲ್ಲಿ ಸ್ಪೆಷಾಲಿಸ್ಟ್ ಡಾಕ್ಟರ್‍ಗಳು ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲೆಯಾದ್ಯಂತ ಇಂದು ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಕರ್ತವ್ಯಕ್ಕೆ ಹಾಜರಾಗಿದ್ದು ರಜಾದಲ್ಲಿರುವ ವೈದ್ಯರನ್ನೂ ಕರ್ತವ್ಯಕ್ಕೆ ಕರೆಸಲಾಗಿದೆ.

ಬಾಗಲಕೋಟೆ: ಗರ್ಭಿಣಿ ಚೈತ್ರಾ ಪಾಲಿಗೆ ದೇವರಾದ ಡಾ. ಮನೋಹರ್

ಹೀಗಾಗಿ ಸಾರ್ವಜನಿಕರು ಚಿಕಿತ್ಸೆ ಹಾಗು ತುರ್ತು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ. ಆರೋಗ್ಯ ಇಲಾಖೆಯ 17 ಅಂಬ್ಯುಲೆನ್ಸ್‍ಗಳು ಹಾಗೂ 108 ಆರೋಗ್ಯ ಕವಚ ಅಂಬ್ಯಲೆನ್ಸ್‍ಗಳು ಸಾರ್ವಜನಿಕರಿಗೆ ಸೇವೆ ನೀಡಲು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಮಂಗಳೂರಿನ ಸರಕಾರಿ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ತುರ್ತು ವೈದ್ಯಕೀಯ ಸೇವೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದ್ದು ಎಂದಿನಂತೆ ಇಂದು ಕೂಡ ವೈದ್ಯಕೀಯ ಚಿಕಿತ್ಸೆಗಳು ಸಾರ್ವಜನಿಕರಿಗೆ ದೊರಕುತ್ತಿವೆ. ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ ಗಳಲ್ಲಿ ಇಂದು 24 ಗಂಟೆ ನಿರಂತರ ಸೇವೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ .

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Govt hospitals in Dakshina Kannada get set to serve the patients 24/7 as private hospital doctors have resorted to protest against Karnataka Private Medical Establishments (amendment) bill 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ