ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪುನರ್ವಸು ಮಳೆ ಆರಂಭ: ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು ಜುಲೈ. 06: ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿ ವಿರಾಮ ಪಡೆದಿದ್ದ ಮಳೆರಾಯ ಮತ್ತೆ ಅಬ್ಬರಿಸತೊಡಗಿದ್ದಾನೆ . ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಾದ್ಯಂತ ಧೋ ಎಂದು ಮಳೆ ಸುರಿಯಲಾರಂಭಿಸಿದೆ. ಕರಾವಳಿಯ ದಕ್ಷಿಣ ಕನ್ನಡ , ಉಡುಪಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯಿಂದ ಭಾರೀ ಮಳೆ ಸುರಿಯಲಾರಂಭಿಸಿದೆ. ಈ ಪರಿಣಾಮ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಮಂಗಳೂರಿನಾದ್ಯಂದ ಮಳೆ ಸುರಿಯುತ್ತಿದೆ. ಉಡುಪಿ, ಕುಂದಾಪುರ, ಕೊಲ್ಲೂರು. ಬೈಂದೂರು, ಕಾರ್ಕಳದಲ್ಲಿ‌ಯೂ ಭಾರೀ ಮಳೆ ಸುರಿಯುತ್ತಿದೆ.

Heavy rain in Dakshina kannada district

ಮಳೆ ಬಂದರೆ ಕೆರೆಯಾಗುವ ಗುಂಡ್ಲುಪೇಟೆ ಬಸ್ ನಿಲ್ದಾಣ!ಮಳೆ ಬಂದರೆ ಕೆರೆಯಾಗುವ ಗುಂಡ್ಲುಪೇಟೆ ಬಸ್ ನಿಲ್ದಾಣ!

ಪುನರ್ವಸು ನಕ್ಷತ್ರ ಆರಂಭದ ಹಿನ್ನಲೆಯಲ್ಲಿ ಕರಾವಳಿಯಲ್ಲಿ‌ ಭಾರೀ ಮಳೆ ಸುರಿತ್ತಿದೆ ಎಂದು ಹೇಳಲಾಗಿದೆ. ಒಂದು‌ ವಾರದಿಂದ ಕರಾವಳಿಯಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಮಳೆರಾಯ ಮತ್ತೇ ಬಿರುಸುಗೊಂಡಿದ್ದಾನೆ. ಭಾರೀ ಮಳೆಯಿಂದಾಗಿ ಕರಾವಳಿಯ ನದಿ, ಕೊಳ್ಳಗಳು ಉಕ್ಕಿ ಹರಿಯುತ್ತಿವೆ.

Heavy rain in Dakshina kannada district

ಕಡಲು ಪ್ರಕ್ಷುಬ್ದಗೊಂಡಿರುವ ಕಾರಣ ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

English summary
As predicted by the Meteorological department Dakshina kannada and Udupi districts of coastal Karnataka received heavy rainfall . Low lying ares have gone under water . Agricultural fields and houses have been surrounded with water
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X