ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದ ರಾಜ್ಯ ಹೆದ್ದಾರಿಯ ಕಿರುಸೇತುವೆ ಜಲಾವೃತ

|
Google Oneindia Kannada News

ಮಂಗಳೂರು, ಆಗಸ್ಟ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತದೆ. ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಸೇರಿದಂತೆ ಮಂಗಳೂರಿನಾದ್ಯಂತ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆಯ ಅಬ್ಬರ, ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವುಮಳೆಯ ಅಬ್ಬರ, ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಈ ಮಧ್ಯೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಕಿರು ಸೇತುವೆ ಜಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಸಂಚಾರಕ್ಕೆ ತೊಡಕುಂಟಾಗಿದೆ.

Rain

'ಮುಳುಗು ಸೇತುವೆ'ಯೆಂದೇ ಗುರುತಿಸಲಾಗುವ ಹಲವಾರು ಜೀವಗಳನ್ನು ಬಲಿ ತೆಗೆದುಕೊಂಡಿರುವ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯು ಜಲಾವೃತಗೊಂಡು ಮುಳುಗಡೆಗೊಂಡಿದೆ.

Bridge

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರಸಕ್ತ ವರ್ಷದಲ್ಲಿ ಸೇತುವೆ ಎರಡನೇ ಸಲ ಮುಳುಗಡೆಗೊಂಡಿದ್ದು, ಸಾರ್ವಜನಿಕರು ಸಂಕಷ್ಟ ಎದುರಿಸಬೇಕಾಗಿದೆ. ಸಂಜೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ವಿವಿಧ ಸಂಸ್ಥೆಗಳ ನೌಕರರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಜನರು ನೆಲ್ಯಾಡಿ, ಇಚಿಲಂಪಾಡಿ ಮೂಲಕ ಸುತ್ತುಬಳಸಿ ಪ್ರಯಾಣಿಸಬೇಕಾಗಿದೆ.

English summary
Heavy rain in Dakshina Kannada, small bridge drowned on Dharmasthala- Kukke Subrahmanya state highway.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X