ಪಶ್ಚಿಮ ವಲಯ ಐಜಿಪಿ ಆಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

Posted By:
Subscribe to Oneindia Kannada

ಮಂಗಳೂರು, ಅ.16 : 'ಸಮಾಜದ ಸ್ವಾಸ್ಥ್ಯ ಕೆಡಿಸುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ' ಪಶ್ಚಿಮ ವಲಯದ ನೂತನ ಐಜಿಪಿ ಹೇಮಂತ್ ನಿಂಬಾಳ್ಕರ್ ಎಚ್ಚರಿಕೆ ನೀಡಿದರು.

ಶರತ್ ಮಡಿವಾಳ ಹತ್ಯೆ, ಪಿಎಫ್ ಐ ಕಾರ್ಯಕರ್ತರ ಬಂಧನ

ಬುಧವಾರ ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ನಿರ್ಗಮಿತ ಐಜಿಪಿ ಹರಿಶೇಖರನ್ ಅವರಿಂದ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕರಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

Hemanth Nimbalkar takes charge as IGP of Western Range

'ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹಿಂದೆ ಪ್ರೊಬೇಷನರಿ ಆಗಿ ಕರ್ತವ್ಯ ಆರಂಭಿಸಿದ್ದೇ. ಕಾರವಾರ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ವಲಯದಲ್ಲಿ ಕೆಲಸ ಮಾಡುವುದು ಬಹಳ ಸವಾಲಿನ ಕೆಸಲ' ಎಂದರು.

45 ಸಬ್ ಇನ್ಸ್‌ಪೆಕ್ಟರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

'ಜನಸಾಮಾನ್ಯರ ನೆಮ್ಮದಿಗೆ ಅಡ್ಡಿ ಪಡಿಸುವವರಿಗೆ ತಕ್ಕ ಉತ್ತರ ನೀಡುತ್ತೇವೆ. ಜನಸಾಮಾನ್ಯರ ನೆಮ್ಮದಿಯ ಜೀವನಕ್ಕೆ ಪೊಲೀಸ್ ಸೇವೆಯಲ್ಲಿ ಇರುವ ಎಲ್ಲಾ ವ್ಯವಸ್ಥೆಯನ್ನು ಒದಗಿಸಲಾಗುತ್ತದೆ' ಎಂದು ಹೇಳಿದರು.

'ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಇನ್ನಷ್ಟು ಜನರ ಬಂಧನ ಆಗಬೇಕಾಗಿದೆ. ಈ ಕುರಿತು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರೊಂದಿಗೆ ಚರ್ಚಿಸುತ್ತೇನೆ' ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Hemanth Nimbalkar on August 16, 2017 in Mangaluru took charge as the new Inspector General of Police, Western Range.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ