ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿಂದೂ ನಾಯಕರಿಗೆ ಸೂಕ್ತ ಭದ್ರತೆ ಕಲ್ಪಿಸಿ: ನಳಿನ್ ಕುಮಾರ್ ಕಟೀಲ್

|
Google Oneindia Kannada News

ಮಂಗಳೂರು, ಜನವರಿ 13: ಕರಾವಳಿಯ ಹಿಂದೂ ನಾಯಕರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದಾರೆ ಎನ್ನುವ ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಕರಾವಳಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಅನ್ವಯ ಕರಾವಳಿಯ ಹಿಂದೂ ನಾಯಕರ ಭದ್ರತೆ ಹೆಚ್ಚಿಸಲಾಗಿದೆ. ಅದರಲ್ಲೂ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.

ಕರಾವಳಿಯ ಹಿಂದೂ ಮುಖಂಡ ಹತ್ಯೆಗೆ ಸಂಚು ರೂಪಿಸಿರುವ ವಿಚಾರದ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಹಿಂದೂ ನಾಯಕರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಕರಾವಳಿಯ ಸಂಘ‌ ಪರಿವಾರದ ಮುಖಂಡರ ಮೇಲೆ ದಾಳಿಗೆ ಸ್ಕೆಚ್?ಕರಾವಳಿಯ ಸಂಘ‌ ಪರಿವಾರದ ಮುಖಂಡರ ಮೇಲೆ ದಾಳಿಗೆ ಸ್ಕೆಚ್?

ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯಿಂದಾಗಿ ಕರಾವಳಿಯಲ್ಲಿ ಅಮಾಯಕ ಹಿಂದೂ ಯುವಕರ ಹತ್ಯೆ ನಡೆದಿದೆ. ಈ ಹಿನ್ನೆಲೆಯಲ್ಲಿ ದುರಂತ ನಡೆಯುವ ಮೊದಲೇ ರಾಜ್ಯ ಸರಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ರಾಷ್ಟ್ರ ವಿರೋಧಿ ಮತೀಯವಾದಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

High security to Hindu leaders in Dakshina Kannada

 ಆರೆಸ್ಸೆಸ್ ಅನ್ನು ತಾಲಿಬಾನ್ ಉಗ್ರರಿಗೆ ಹೋಲಿಸಿದ ಸಿಪಿಐಎಂ ಮುಖಂಡ ಆರೆಸ್ಸೆಸ್ ಅನ್ನು ತಾಲಿಬಾನ್ ಉಗ್ರರಿಗೆ ಹೋಲಿಸಿದ ಸಿಪಿಐಎಂ ಮುಖಂಡ

ಆರ್ ಎಸ್ ಎಸ್ ಮುಖಂಡರಾದ ಕಲ್ಲಡ್ಕ ಡಾ. ಪ್ರಭಾಕರ ಭಟ್‌ , ವಿಶ್ವ ಹಿಂದೂ ಪರಿಷತ್‌ನ ಮುಖಂಡರಾದ ಜಗದೀಶ ಶೇಣವ ಮತ್ತು ಶರಣ್ ಪಂಪ್ ವೆಲ್ ಹತ್ಯೆಗೆ ಮತೀಯ ಶಕ್ತಿಗಳು ಸಂಚು ನಡೆಸಿವೆ ಎನ್ನುವ ಮಾಹಿತಿಯಿಂದ ಕರಾವಳಿಯಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ ಈ ಆತಂಕ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.

English summary
Hindu leaders including RSS leader Dr Kalladaka Prabhakara Bhat have been given High security.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X