ಮಂಗಳೂರಿನಲ್ಲಿ ಹೈ ಟೆಕ್ ವೇಶ್ಯಾವಾಟಿಕೆ ಜಾಲ ಬಯಲು

Posted By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 9: ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ, ಇಬ್ಬರು ಮಹಿಳೆಯರು ಸೇರಿದಂತೆ ಮೂರು ಮಂದಿಯನ್ನು ಬಂಧಿಸಿದ್ದಾರೆ. ಮಂಗಳೂರಿನ ಕದ್ರಿ ಕೈ ಬಟ್ಟಲ್ ಎಂಬಲ್ಲಿ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಯುವತಿಯರನ್ನು ರಕ್ಷಿಸಿದ್ದಾರೆ.

ಮಂಗಳೂರಿನ ಖ್ಯಾತ ಬಿಲ್ಡರ್ ಪುತ್ರಿ ಆತ್ಮಹತ್ಯೆ

ಹೈಟೆಕ್ ವೇಶ್ಯಾವಾಟಿಕೆ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು, ಎಸಿಪಿ ಉದಯ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ರಕ್ಷಿಸಲಾದ ಯುವತಿಯರು ಬೆಂಗಳೂರಿನವರು ಎಂದು ಹೇಳಲಾಗಿದೆ.

High tech prostitution racket unearthed by Kadri police

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿ ಸ್ಥಳೀಯ ನಿವಾಸಿ ರಮೇಶ್ ಎಂಬಾತನನ್ನು ಕೂಡ ಬಂಧಿಸಲಾಗಿದೆ. ಮೊಬೈಲ್ ಸೇರಿದಂತೆ ಸಾಮಾಜಿಕ ಜಾಲತಾಣದ ಮೂಲಕ ಗುಪ್ತವಾಗಿ ಈ ಹೈಟೆಕ್ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಪೊಲೀಸರಿಗೆ ಅವಾಜ್ ಹಾಕಿದ್ದ ಸಂಸದ ನಳಿನ್ ವಿರುದ್ಧ ಪೊಲೀಸರ ದೂರು

ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಮಾರುವೇಷದಲ್ಲಿ ತೆರಳಿ ದಾಳಿ ನಡೆಸಿದ್ದಾರೆ. ಅತ್ಯಂತ ರಹಸ್ಯವಾಗಿ ಕಾರ್ಯಾಚರಿಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆಯನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ.

ದಾಳಿ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
High tech prostitution racket unearthed by Kadri police in mangalore. 2 women and a man arrested.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ