'ಆಳ್ವರೊಂದಿಗೆ ನಾವು' ಕಾರ್ಯಕ್ರಮಕ್ಕೆ ಅಡ್ಡಿ, ಮೂವರ ಬಂಧನ

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 10 : 'ನುಡಸಿರಿಯ ದ್ವನಿ ಆಳ್ವರೊಂದಿಗೆ ನಾವು' ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಹಿಂದೂ ಮಹಾಸಭಾದ ಕಾರ್ಯಕರ್ತರನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.

ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ 'ನುಡಸಿರಿಯ ದ್ವನಿ ಆಳ್ವರೊಂದಿಗೆ ನಾವು' ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ಹಿಂದೂ ಮಹಾಸಭಾದ ಕಾರ್ಯಕರ್ತರು ಯತ್ನಿಸಿದರು. ಈ ಸಂದರ್ಭದಲ್ಲಿ ಪೋಲೀಸರು ಮೂವರು ಹಿಂದೂ ಮಹಾಸಭಾ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

Hindu Mahasabha members arrested for disurbing meeting in favour of Mohan Alwa

ಈ ವೇಳೆ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯ ಅನುಮಾನಾಸ್ಪದ ಸಾವಿನ ಪ್ರಕರಣದ ಪಾರದರ್ಶಕ ತನಿಖೆಗೆ ಒತ್ತಾಯಿಸಿದರು ಇನ್ನೊಂದೆಡೆ ಇದೀಗ ಸಂಸ್ಥೆಯ ಅಧ್ಯಕ್ಷರಾದ ಮೋಹನ್ ಆಳ್ವ ಪರ ವಿರೋಧ ಅಭಿಪ್ರಾಯಗಳು ಘರ್ಷಣೆಯ ಹಂತಕ್ಕೆ ತಲುಪಿದೆ.

ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ರೀಡಾ ಸಾಧಕ-ಸಂಘಟಕರ ಕರೆ ಎನ್ನುವ ವೇದಿಕೆಯು ಇಂದು ಮಂಗಳೂರಿನ ಪುರಭವನದಲ್ಲಿ ನುಡಸಿರಿಯ ದ್ವನಿ ಆಳ್ವರೊಂದಿಗೆ ನಾವು ಕಾರ್ಯಕ್ರಮ ನಡೆಸಬಾರದೆಂದು ಅಖಿಲ ಭಾರತ ಹಿಂದೂ ಮಹಾಸಭಾ ಸಂಘಟನೆಯ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದರು.

Hindu Mahasabha members arrested for disurbing meeting in favour of Mohan Alwa
Mangaluru : Quarrel Between Students Infornt Of Milagres Students

ಇದಕ್ಕೆ ಖ್ಯಾರೆ ಎನ್ನದೆ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ರೀಡಾ ಸಾಧಕ-ಸಂಘಟಯು ಕಾರ್ಯಕ್ರಮವನ್ನು ನಡೆಸಲಾಗಿತ್ತು. ಇದಕ್ಕೆ ಅಡ್ಡಿ ಪಡಿಸಲು ಯತ್ನಿಸಿದ ಹಿಂದೂ ಸಂಘಟನೆ ಮೂವರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Hindu Mahasabha members arrested for disurbing meeting in which was held Town hall today in favour of Mohan Alwa here on Aug 10. Three have been arrested in this case.
Please Wait while comments are loading...