ಫೆ. 11ರಿಂದ ಕದ್ರಿಯಲ್ಲಿ ಜೇನು ಹಾಗೂ ಸಾವಯವ ಮೇಳ

Posted By: Ramesh
Subscribe to Oneindia Kannada

ಮಂಗಳೂರು, ಫೆಬ್ರವರಿ. 06 : ಜೇನು ಸಾಕಾಣಿಕೆ ಮತ್ತು ಜೇನು ಆಧಾರಿತ ಚಟುವಟಿಕೆಗೆ ಉತ್ತೇಜನ ನೀಡುವ ದೃಷ್ಟಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫೆಬ್ರವರಿ 11 ಹಾಗೂ 12ರಂದು ಜೇನು ಮೇಳ ಹಾಗೂ ಸಾವಯವ ಮೇಳವನ್ನು ಆಯೋಜಿಸಲಾಗಿದೆ.

ತೋಟಗಾರಿಕೆ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಜೇನು ಸಾಕಣೆ, ಸಾವಯವ ಕೃಷಿ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

Honey-cum-organic fair at Kadri park mangaluru to be held on Feb 11 to 12

ಹಾಗೂ ಜೇನಿನ ಉತ್ಪನ್ನಗಳು, ಜೇನಿನ ಮೌಲ್ಯವರ್ಧಿತ ಉತ್ಪನ್ನಗಳು, ಜೇನಿನಿಂದ ತಯಾರಿಸಲ್ಪಡುವ ಔಷಧಿಗಳು, ಸಾವಯವ ಉತ್ಪನ್ನಗಳು, ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು.

ಈ ನಿಟ್ಟಿನಲ್ಲಿ ಮಳಿಗೆಗಳನ್ನು ಸ್ಥಾಪಿಸಲು ಆಸಕ್ತ ರೈತರು, ಸಂಘ ಸಂಸ್ಥೆಗಳು, ಉದ್ದಿಮೆದಾರರಿಗೆ ಅವಕಾಶ ಕಲ್ಪಿಸಲಾಗುವುದು. ಆಸಕ್ತರು ತೋಟಗಾರಿಕೆ ಇಲಾಖೆಗೆ ದೂರವಾಣಿ ಸಂಖ್ಯೆ- 0824-2412628, 9480354968ಗೆ ಸಂಪರ್ಕಿಸಲು ತೋಟಗಾರಿಕೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A two-day festival on apiculture and organic farming organised by Horticulture Department on feb 11 and 12 at kadri park Mangaluru.
Please Wait while comments are loading...