ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ: ಪೊಲೀಸ್‌ಗೆ ನೊಟೀಸ್

Posted By:
Subscribe to Oneindia Kannada

ಮಂಗಳೂರು, ಜನವರಿ 09: ಮೂಡಬಿದಿರೆಯ ಆಳ್ವಾಸ್ ಶಾಲೆ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೊಟೀಸ್ ನೀಡಿದೆ.

ಕಾವ್ಯಾ ಪೂಜಾರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಮತ್ತು ದಾಖಲೆಗಳ ಸಮೇತ ಇನ್ನು ನಾಲ್ಕು ವಾರಗಳ ಒಳಗೆ ಮಾನವ ಹಕ್ಕು ಆಯೋಗದ ಮುಂದೆ ಹಾಜರಾಗುವಂತೆ ನೊಟೀಸ್‌ನಲ್ಲಿ ಸೂಚಿಸಲಾಗಿದೆ.

ಆತ್ಮಹತ್ಯೆಯೋ ಕೊಲೆಯೋ: ಕಾವ್ಯಾ ಪೋಷಕರ ಆರೋಪ, ಆಳ್ವ ಪ್ರತಿಕ್ರಿಯೆ

ಆಳ್ವಾಸ್‌ನಲ್ಲಿ ಓದುತ್ತಿದ್ದ ಕಾವ್ಯಾ ಕಳೆದ ವರ್ಷ ಜುಲೈ 20ರಂದು ತನ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ ಸಾವು ರಾಜ್ಯಾದ್ಯಂತ ಕೋಲಾಹಲ ಸೃಷ್ಠಿಸಿತ್ತು, ದೈಹಿಕ ಶಿಕ್ಷಕನೋರ್ವನ ಕಿರುಕುಳದಿಂದ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಊಹಾಪೋಹ ಹರಡಿತ್ತು.

Human Rights Commission issue notice to Mangalore police

ಕಾವ್ಯಾ ಪೂಜಾರಿ ಸಾವಿನ ತನಿಖೆ ಹಾಗೂ ಆಳ್ವಾಸ್‌ ಶಾಲೆಯಲ್ಲಿ ಮಾನವ ಹಕ್ಕು ಉಲ್ಲಂಘನೆ ಆಗುತ್ತಿದೆ ಎಂದು ಮಾನವ ಹಕ್ಕು ಹೋರಾಟಗಾರ ಸಾದಿಕ್ ಪಾಷಾ ಎಂಬುವರು ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಿದ್ದರು.

ಕಾವ್ಯಾ ಪೂಜಾರಿ ಸಾವಿನ ತನಿಖೆ ಸಿಬಿಐಗೆ ವಹಿಸಲು ಆಗ್ರಹ

ಇಂದು (ಜನವರಿ 09) ಮೂಡಬಿದಿರೆ ಆಳ್ವಾಸ್ ಕ್ಯಾಂಪಸ್‌ನ ನಂದಿನಿ ಹಾಸ್ಟೆಲ್‌ನ ವಿದ್ಯಾರ್ಥಿ ತೇಜಸ್ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದೇ ದಿನದಂದು ಈ ಹಿಂದೆ ಅದೇ ಶಾಲೆಯಲ್ಲಿ ನಡೆದ ಸಾವಿನ ಪ್ರಕರಣದ ಬಗ್ಗೆ ನೊಟೀಸ್ ನೀಡಲಾಗಿರುವುದು ಕಾಕತಾಳೀಯ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
National Human Rights Commission issue notice to Mangalore police commissioner for asking investigation report of Mudabidire Alvas student Kavya Poojari death case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ