ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪೇಂದ್ರ ಕೆಪಿಜೆಪಿಗೆ 224 ಮಂದಿ ಸಿಎಂ ಬೇಕಿದ್ದಾರೆ

|
Google Oneindia Kannada News

ಮಂಗಳೂರು, ಡಿಸೆಂಬರ್ 5: "ರಾಜ್ಯದಲ್ಲಿ ಜನರ ಮಧ್ಯೆ ಕೆಲಸ ಮಾಡುವ 224 ಜನ ಸಿಎಂ ನನಗೆ ಬೇಕಿದ್ದಾರೆ. ಅವರು ತಮ್ಮ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳಂತೆ ಜನರ ಸಮಸ್ಯೆಗಳನ್ನು ಪರಿಹರಿಸಬೇಕು" ಎಂದು ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ (ಕೆಪಿಜೆಪಿ) ಸಂಸ್ಥಾಪಕ- ನಟ ಉಪೇಂದ್ರ ತಿಳಿಸಿದರು.

ಕೆಪಿಜೆಪಿ ಕ್ಯಾಶ್ ಲೆಸ್ ಪಕ್ಷ, ಮೈಸೂರಿನಲ್ಲಿ ಧೂಳೆಬ್ಬಿಸಿದ ಉಪ್ಪಿಕೆಪಿಜೆಪಿ ಕ್ಯಾಶ್ ಲೆಸ್ ಪಕ್ಷ, ಮೈಸೂರಿನಲ್ಲಿ ಧೂಳೆಬ್ಬಿಸಿದ ಉಪ್ಪಿ

ಕೆಪಿಜೆಪಿಯ ಪ್ರಚಾರದ ಸಲುವಾಗಿ ಇಲ್ಲಿಗೆ ಭೇಟಿ ನೀಡಿದ ಅವರು ಮಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಿರುವ ರಾಜಕೀಯ ವ್ಯವಸ್ಥೆಯ ವ್ಯತಿರಿಕ್ತವಾಗಿ ಕೆಪಿಜೆಪಿಯನ್ನು ಆರಂಭಿಸಿದ್ದೇವೆ ಎಂದು ತಿಳಿಸಿದರು.

I need 224 CM one who work like CM in there constituency, Upendra says

ಒಬ್ಬ ಕಾರ್ಮಿಕನಾಗಿ ಜನರ ಮುಂದೆ ಹೋಗುತ್ತಿದ್ದೇನೆ. ನನ್ನ ಯೋಚನೆಗಳನ್ನು ಮುಂದಿಟ್ಟು ಅವರೊಂದಿಗೆ ಮಾತನಾಡುತ್ತಿದ್ದೇನೆ. ಸಮಾಜದಲ್ಲಿನ ಪ್ರಜ್ಞಾವಂತರು ಪಕ್ಷಕ್ಕೆ ಬನ್ನಿ ಎಂದು ಅವರು ಕರೆ ನೀಡಿದರು.

ಎಲ್ಲಿ ಸತ್ಯ ಇರುತ್ತದೋ ಅಲ್ಲಿ ಧರ್ಮ ಇರುತ್ತದೆ. ಸತ್ಯ ಇದ್ದಲ್ಲಿ ಧರ್ಮದ ಅಗತ್ಯ ಇರುವುದಿಲ್ಲ. ಅನ್ಯಾಯವನ್ನು ಪ್ರತಿಭಟಿಸುವ ಮನಸ್ಥಿತಿ ನಮ್ಮಲ್ಲಿ ಇಲ್ಲದಂತಾಗಿದೆ. ಶಿಕ್ಷಣ, ವೈದ್ಯಕೀಯ ವ್ಯವಸ್ಥೆ ಉಚಿತವಾಗಿ ಸಿಕ್ಕಿದರೆ ಯಾರೂ ಭೃಷ್ಟಾಚಾರಿಗಳು ಆಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಈ ದೇಶದಲ್ಲಿ ಶೇ 80ರಷ್ಟು ಒಳ್ಳೆಯವರಿದ್ದಾರೆ. ಆ 80ರಷ್ಟು ಜನರ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ. ಕೆಪಿಜೆಪಿಯ ಒಬ್ಬೊಬ್ಬ ಅಭ್ಯರ್ಥಿಯು ಮುಖ್ಯಮಂತ್ರಿಯಂತೆ ಕೆಲಸ ಮಾಡಬೇಕು. ದೇಶದಲ್ಲಿ ಏಕಕಾಲದಲ್ಲಿ ಚುನಾವಣೆ ನಡೆಯುವ ಮೊದಲು ರಾಜ್ಯಗಳಲ್ಲಿ ವಿಧಾನ ಸಭೆ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಏಕ ಕಾಲಕ್ಕೆ ನಡೆಯಬೇಕು ಎಂದು ಅವರು ಹೇಳಿದರು

English summary
I have just created a platform for people. Those who are passionate about the cause can join me. It has always been my dream to make a change, says Upendra in Mangaluru on Tuesday, December 5th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X