ನಂಜನಗೂಡಿನಲ್ಲಿ ಗೆಲ್ಲದಿದ್ದರೆ ಸಿದ್ದರಾಮಯ್ಯ ಮನೆಗೆ ಹೋಗಲಿ: ಪೂಜಾರಿ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ನವೆಂಬರ್ 4: ಮುಂಬರುವ ಮೈಸೂರು ಉಪಚುನಾವಣೆಯಲ್ಲಿ ಪ್ರತಿಪಕ್ಷಗಳು ಒಟ್ಟಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಹೋಗಬೇಕಾಗಬಹುದು ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಎಚ್ಚರಿಸಿದರು. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ಮತ್ತು ಕಾರ್ಯಕರ್ತರು ಹಾಗೂ ಸರಕಾರದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಪಕ್ಷ ಉಳಿಸುವ ಕೆಲಸ ಮಾಡಲಿ ಎಂದರು,

ಚುನಾವಣೆಗೆ ಯಾರನ್ನು ಬೇಕಾದರೂ ನಿಲ್ಲಿಸಲಿ, ಪಕ್ಷ ಗೆಲ್ಲಬೇಕು. ಅದು ಸಾಧ್ಯವಾಗದಿದ್ದಲ್ಲಿ ರಾಜೀನಾಮೆ ನೀಡಿ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ತೊರೆದ ಶ್ರೀನಿವಾಸ ಪ್ರಸಾದ್ ಪಕ್ಷೇತರರಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಜೆಡಿಎಸ್ ಅವರಿಗೆ ಬೆಂಬಲ ನೀಡಲಿದೆ ಎಂದು ದೇವೇಗೌಡರು ಈಗಾಗಲೇ ಹೇಳಿದ್ದಾರೆ. ಮೊದಲಿಗೆ ಸಿದ್ದರಾಮಯ್ಯ ಅವರು ಅಹಂಕಾರ ಹಾಗೂ ಉಡಾಫೆಯ ಮಾತುಗಳನ್ನು ಬಿಟ್ಟುಬಿಡಲಿ ನಂತರ ಚುನಾವಣೆಗೆ ಸರಿಯಾದ ಕಾರ್ಯತಂತ್ರ ರೂಪಿಸಲಿ ಎಂದು ಎಚ್ಚರಿಸಿದರು.[ಸಿದ್ದರಾಮಯ್ಯ ರಾಜೀನಾಮೆ ನೀಡ್ಲಿ, ಪರಂ ಸಿಎಂ ಆಗಲಿ: ಪೂಜಾರಿ]

If Congress lose Nanjanagud election cm should resign

ಅದು ಸಾಧ್ಯವಾಗದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ, ಇದರಿಂದ ಪಕ್ಷಕ್ಕೆ ಯಾವುದೇ ರೀತಿ ನಷ್ಟವಿಲ್ಲ ಎಂದರು. ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ರಥಯಾತ್ರೆ ಮಾಡಿದರೆ, ಪಕ್ಷದೊಳಗಿನ ಅಸಮಾಧಾನದಿಂದ ಕಾರ್ಯಕರ್ತರು ಹೊಡೆದಾಡಿಕೊಳ್ಳುತ್ತಿದ್ದಾರೆ, ಈ ರೀತಿಯ ತಪ್ಪನ್ನು ನೀವು ಮಾಡಬೇಡಿ ಎಂದರು.[ಸಿಎಂ ಇಬ್ರಾಹಿಂನ ಕಾಂಗ್ರೆಸ್ ನಿಂದ ಉಚ್ಚಾಟಿಸಿ: ಪೂಜಾರಿ]

ಪಕ್ಷದ ಎಲ್ಲ ನಾಯಕರನ್ನು ಒಟ್ಟುಗೂಡಿಸಿಕೊಂಡು ಮುಂದುವರೆಯಿರಿ. ಪಕ್ಷದ ಹಿತದೃಷ್ಟಿಯಿಂದ ಕಾರ್ಯತಂತ್ರ ರೂಪಿಸಿ. ಒಟ್ಟಿನಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಗೆಲ್ಲಬೇಕು. ಇಲ್ಲವಾದಲ್ಲಿ ನಿಮ್ಮ ಸಿಎಂ ಸ್ಥಾನಕ್ಕೆ ಕುತ್ತು ಬರಲಿದೆ ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
If Congress lose Nanjanagud election CM Siddaramaiah should resign, said by senior leader Janardana Poojari in Mangaluru.
Please Wait while comments are loading...