ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

Posted By:
Subscribe to Oneindia Kannada

ಮಂಗಳೂರು, ಫೆಬ್ರವರಿ 8: ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಮಂಗಳೂರು ಪೊಲೀಸರು ಕುಖ್ಯಾತ ಟಾರ್ಗೆಟ್ ಗ್ಯಾಂಗ್ ಇಲ್ಯಾಸ್ ಹತ್ಯೆ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಉಳ್ಳಾಲ ನಿವಾಸಿ ಸಮೀರ್ (26) ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಕೇರಳದ ಅಡಗುತಾಣದಿಂದ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಬಂಧಿತ ಆರೋಪಿ ಸಮೀರ್ ಜನವರಿ 13ರಂದು ಬೆಳಿಗ್ಗೆ ಇಲ್ಯಾಸ್ ಮೇಲೆ ನಡೆದ ದಾಳಿಯಲ್ಲಿ ನೇರವಾಗಿ ಭಾಗಿಯಾಗಿದ್ದ ಎನ್ನಲಾಗಿದೆ.

Ilyas murder case: one accused arrested by Mangaluru CCB police

ಹಲವಾರು ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಇಲ್ಯಾಸ್ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ದಾಳಿ ನಡೆಯುವ ವೇಳೆ ಮಂಗಳೂರಿನ ಜಪ್ಪು ಕುಡ್ಪಾಡಿ ಎಂಬಲ್ಲಿರುವ ಮಸೀದಿಯ ಎದುರುಗಡೆಯ ಫ್ಲಾಟ್ ನಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ.

ಜನವರಿ 13 ರಂದು ಮುಂಜಾನೆ ದುಷ್ಕರ್ಮಿಗಳಿಬ್ಬರು ಮನೆ ಬಾಗಿಲನ್ನು ಒಡೆದು ಒಳ ನುಗ್ಗಿ ಮಲಗಿದ್ದ ಇಲ್ಯಾಸ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇಲ್ಯಾಸ್ ನನ್ನು ಆಸ್ಪತ್ರೆ ಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದ.

ಇಲ್ಯಾಸ್ ಒರ್ವ ಕುಖ್ಯಾತ ರೌಡಿ ಶೀಟರ್ ಆಗಿದ್ದ. 23 ಕ್ಕೂ ಮಿಕ್ಕಿ ಅಪರಾಧ ಪ್ರಕರಣಗಳಾದ ಹನಿಟ್ರಾಪ್, ಸುಲಿಗೆ, ಅಪಹರಣ, ಅತ್ಯಾಚಾರ ಸೇರಿದಂತೆ ಹಲವು ಪ್ರಕರಣಗಳು ಆತನ ಮೇಲಿತ್ತು. ದೇರಳಕಟ್ಟೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಪಹರಿಸಿ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿ ಬ್ಲಾಕ್ ಮೇಲ್ ಮಾಡಿದ್ದ ಪ್ರಕರಣದಲ್ಲೂ ಇಲ್ಯಾಸ್ ಪ್ರಮುಖ ಆರೋಪಿಯಾಗಿದ್ದ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mangaluru CCB police arrested one of the assailants of Ilyas from Target Group. Arrested person is identified as Shamir, he was arrested from Kerala.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ