ಚಿತ್ರಗಳು : ಮಂಗಳೂರಿನಲ್ಲಿ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಆಗಸ್ಟ್ 17 : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು. ಎಬಿವಿಪಿ ಕಾರ್ಯಕರ್ತರ ಮೇಲೆ ಬೆಂಗಳೂರಿನಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಲಾಯಿತು.

ಮಂಗಳೂರು ನಗರದ ಅಂಬೇಡ್ಕರ್ ವೃತ್ತದಿಂದ ಹೊರಟ ನೂರಾರು ವಿದ್ಯಾರ್ಥಿಗಳ ಪ್ರತಿಭಟನಾ ಜಾಥಾ ಜಿಲ್ಲಾಧಿಕಾರಿ ಕಚೇರಿ ಎದುರು ಅಂತ್ಯಗೊಂಡಿತು. ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳು ಆಮ್ನೆಸ್ಟಿ ಇಂಟರ್‌ನ್ಯಾಷನಲ್ ಎನ್‌ಜಿಓ ವಿರುದ್ಧ ಘೋಷಣೆ ಕೂಗಿದರು.[ಬೆಂಗಳೂರಲ್ಲಿ ಎಬಿವಿಪಿ ಅಸಹಕಾರ ಚಳವಳಿ]

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಬಿವಿಪಿಯ ಮುಖಂಡ ಕೀರ್ತನ್ ಅವರು, 'ಭಾರತೀಯ ಸೇನೆಯ ವಿರುದ್ಧ ದೇಶ ವಿರೋಧಿ ಘೋಷಣೆಯನ್ನು ಕೂಗಿದ ಕಾರಣಕ್ಕಾಗಿ ಈ ಪ್ರತಿಭಟನೆ ನಡೆಸಿದ್ದೇವೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.[ಆಮ್ನೆಸ್ಟಿ ಇಂಟರ್ ನ್ಯಾಷನಲ್ ವಿರುದ್ಧ ಎಬಿವಿಪಿ ಬೃಹತ್ ಪ್ರತಿಭಟನೆ]

ಮಂಗಳವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ ಪೊಲೀಸರ ಕ್ರಮವನ್ನು ವಿದ್ಯಾರ್ಥಿಗಳು ಖಂಡಿಸಿದರು. ಪ್ರತಿಭಟನೆಯ ಚಿತ್ರಗಳು ಇಲ್ಲಿವೆ.....

ಬೇಡಿಕೆಗಳನ್ನು ಈಡೇರಿಸಿಲ್ಲ

ಬೇಡಿಕೆಗಳನ್ನು ಈಡೇರಿಸಿಲ್ಲ

ರಾಜ್ಯ ಸರಕಾರ ವಿದ್ಯಾರ್ಥಿಗಳ ಬೇಡಿಕೆಗಳನ್ನು ಕೇಳುವ ಬದಲಿಗೆ ಪೊಲೀಸ್ ಪಡೆಗಳನ್ನು ಬಳಸಿ ಪ್ರತಿಭಟನೆ ಮಾಡದಂತೆ ತಡೆದಿದ್ದಾರೆ. ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ. ನಮ್ಮ ಪ್ರತಿಭಟನೆ ರಾಜ್ಯ ಸರಕಾರದ ವಿರುದ್ಧ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಪಾಲರಿಗೆ ಕಳಿಸುತ್ತೇವೆ

ರಾಜ್ಯಪಾಲರಿಗೆ ಕಳಿಸುತ್ತೇವೆ

ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ ಮಾತನಾಡಿದ ಡಿಸಿ ಡಾ.ಜಗದೀಶ್ ಅವರು, 'ಇದು ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ನೀವು ಸಲ್ಲಿಸಿದ ಮನವಿಯನ್ನು ಖಂಡಿತವಾಗಿಯೂ ರಾಜ್ಯಪಾಲರಿಗೆ ಕಳಿಸುತ್ತೇನೆ' ಎಂದು ಭರವಸೆ ನೀಡಿದರು.

ಅಸಹಕಾರ ಚಳವಳಿ

ಅಸಹಕಾರ ಚಳವಳಿ

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ರಾಜ್ಯಾದ್ಯಂತ ಎಬಿವಿಪಿ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಅಸಹಕಾರ ಚಳವಳಿ ನಡೆಸಲಾಯಿತು. ಮಹಾರಾಣಿ ಕಾಲೇಜಿನಿಂದ ಬೃಹತ್ ಮೆರವಣಿಗೆ ಹೊರಟು ಮೈಸೂರು ಬ್ಯಾಂಕ್ ಸರ್ಕಲ್‌ಗೆ ಆಗಮಿಸಿದರು.

ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು

ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಬೆಂಗಳೂರಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಚಾರ್ಜ್ ಮಾಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Thousands of students under the banner of Akhil Bharatiya Vidhyarthi Parishad (ABVP) on Wednesday protested over anti-India slogans allegedly raised at the Amnesty International India event in Bengaluru.
Please Wait while comments are loading...