ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಬಿಜೆಪಿ ಮೈತ್ರಿ ಸರ್ಕಾರ ಕೆಡವಲು ಷಡ್ಯಂತ್ರ ರೂಪಿಸುತ್ತಿದೆ'

|
Google Oneindia Kannada News

ಮಂಗಳೂರು, ಸೆಪ್ಟೆಂಬರ್.23 : ಬಿಜೆಪಿ ಮುಖಂಡರು ಜನರ ಭಾವನೆಗಳೊಂದಿಗೆ ಆಟವಾಡುತ್ತಾ ಮೈತ್ರಿ ಸರಕಾರವನ್ನು ಕೆಡವಲು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞ ಆರೋಪಿಸಿದ್ದಾರೆ.

ಸಿಎಂ ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ:ಸಿಟಿ ರವಿಸಿಎಂ ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ:ಸಿಟಿ ರವಿ

ಮಂಗಳೂರಿನಲ್ಲಿ ಶನಿವಾರ(ಸೆ.23) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರ ದಂಗೆ ಹೇಳಿಕೆ ಕುರಿತಂತೆ ಬಿಜೆಪಿಯವರು ಜನರ ಭಾವನೆಗಳ ಜೊತೆಗೆ ಆಟವಾಡುತ್ತಿದ್ದಾರೆ. ಹೇಗಾದರೂ ಮಾಡಿ ಸಮ್ಮಿಶ್ರ ಸರ್ಕಾರವನ್ನು ಕೆಡವಲು ಸಂಚು ರೂಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಎಸ್‌ವೈ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಶಾಸಕರೊಂದಿಗೆ ಜಟಾಪಟಿಬಿಎಸ್‌ವೈ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ, ಶಾಸಕರೊಂದಿಗೆ ಜಟಾಪಟಿ

ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡರು ಕೋಮು ಪ್ರಚೋದನೆಯ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸೊಲ್ಲೆತ್ತದ ಬಿಜೆಪಿ ನಾಯಕರು ಈಗ ಸಿಎಂ ಹೇಳಿಕೆ ಕುರಿತಂತೆ ಸುಖಾಸುಮ್ಮನೆ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

JDS district president Mohamad Kunhi slams BJP

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಹಲವಾರು ಬಾರಿ ಸಮಾಜದಲ್ಲಿ ಶಾಂತಿ ಕದಡುವ ಹೇಳಿಕೆ ನೀಡಿದ್ದಾರೆ. ಮಂಗಳೂರು ಹೊರವಲಯ ಮುಡಿಪು ಎಂಬಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಕಟೀಲ್ ಜಿಲ್ಲೆಗೆ ಬೆಂಕಿ ಹಚ್ಚುವ ಹೇಳಿಕೆ ನೀಡಿದ್ದರು.

ಕುಮಾರಸ್ವಾಮಿ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ: ಕೋಟ ಶ್ರೀನಿವಾಸ್ ಪೂಜಾರಿಕುಮಾರಸ್ವಾಮಿ ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ: ಕೋಟ ಶ್ರೀನಿವಾಸ್ ಪೂಜಾರಿ

ಈ ಹಿನ್ನೆಲೆಯಲ್ಲಿ ಬಿಜೆಪಿ ಅವರಿಂದ ಬುದ್ದಿ ಹೇಳಿಸಿಕೊಳ್ಳುವ ಅಗತ್ಯತೆ ಇಲ್ಲ ಎಂದರು.

English summary
Mangaluru JDS district president Mohamad Kunhi slams BJP. He said that BJP leaders playing with peoples emotions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X