ಮೂಡುಬಿದಿರೆಯಲ್ಲಿ ಜುಲೈ 2, 3ರಂದು ಉದ್ಯೋಗ ಮೇಳ

Posted By:
Subscribe to Oneindia Kannada

ಮೂಡುಬಿದಿರೆ, ಜೂನ್ 27 : ಮೂಡುಬಿದಿರೆಯ ಆಳ್ವಾಸ್ ಪ್ರತಿಷ್ಠಾನದ ವತಿಯಿಂದ ಜುಲೈ 3 ಮತ್ತು 4ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. 400ಕ್ಕೂ ಅಧಿಕ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ.

ಗ್ರಾಮೀಣ ಯುವ ಜನರಿಗೆ ಉದ್ಯೋಗವನ್ನು ಒದಗಿಸಲು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಎರಡು ದಿನಗಳ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳ ಅಳ್ವಾಸ್ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿಲ್ಲ, ರಾಜ್ಯದ ಯಾವುದೇ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ.

ಎರಡು ದಿನಗಳ ಉದ್ಯೋಗ ಮೇಳದಲ್ಲಿ ಒರಾಕಲ್, ಐಬಿಎಂ, ಅಮೆಜಾನ್, ಬಯೋಕಾನ್, ಟೆಕ್ ಮಹೀಂದ್ರಾ, ಟೈಟಾನ್, ಅದಾನಿ ಗ್ರೂಪ್, ವಿಪ್ರೋ ಸೇರಿದಂತೆ 400ಕ್ಕೂ ಅಧಿಕ ಕಂಪನಿಗಳು ಭಾಗವಹಿಸಲಿವೆ. [ಉದ್ಯೋಗಿನಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ]

jobs

ಉದ್ಯೋಗ ಮೇಳದಲ್ಲಿ ಭಾಗವಹಿಸುವವರಿಗೆ ಟೆಲಿಕಾಂ, ಐಟಿ, ಸೇಲ್ಸ್ ಮತ್ತು ಬ್ಯಾಕಿಂಗ್, ಹೋಟೆಲ್ ಮ್ಯಾನೇಜ್‌ ಮೆಂಟ್, ಆಟೋಮೊಬೈಲ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವ ಅವಕಾಶಗಳಿವೆ.

ಮೇಳದಲ್ಲಿ ಪಾಲ್ಗೊಳ್ಳುವವರು ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ವ-ವಿವರ ಹಾಗೂ ಪಾಸ್‌ಪೋರ್ಟ್‌ ಗ್ರಾತ್ರದ ಭಾವಚಿತ್ರಗಳನ್ನು ಜೊತೆಯಲ್ಲಿ ತರಬೇಕು. [ಬಿಎಂಆರ್ ಸಿಎಲ್ ನೇಮಕಾತಿ ವಿವರ]

ಕೆಪಿಎಸ್‌ಸಿ ನೇಮಕಾತಿ ವಿವರ : ಕರ್ನಾಟಕ ಅರಣ್ಯ ಇಲಾಖೆ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2012ರ ಅನ್ವಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಖಾಲಿ ಇರುವ ಗ್ರೂಪ್ - 'ಎ' ವೃಂದದ 25 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿಯ ಪರೀಕ್ಷೆಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 8, 2016 ಕೊನೆಯ ದಿನ. [ವಿವರಗಳು]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Moodbidri Alva's Education Foundation organized job fair on July 2 and 3, 2016 at Vidyagiri. More than 400 company will participate in two days job fair.
Please Wait while comments are loading...