ಕಾವ್ಯ ಆತ್ಮಹತ್ಯೆ ಪ್ರಕರಣ: ಆ.9 ರಂದು ಮಂಗಳೂರಿನಲ್ಲಿ ಪ್ರತಿಭಟನೆ

By: ಕಿರಣ್ ಸಿರ್ಸೀಕರ್
Subscribe to Oneindia Kannada

ಮಂಗಳೂರು, ಆಗಸ್ಟ್ 4: ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಪೂಜಾರಿ ಸಾವಿನ ಪಾರದರ್ಶಕ ತನಿಖೆಯ ಒತ್ತಾಯಿಸಿ 'ಜಸ್ಟೀಸ್ ಫಾರ್ ಕಾವ್ಯ' ಹೋರಾಟ ಸಮಿತಿ ಆಗಸ್ಟ್ 9 ರಂದು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದೆ.

ಆಳ್ವಾಸ್ ನ ಕಾವ್ಯ ನಿಗೂಢ ಸಾವಿನ ತನಿಖೆ ಕೈಗೆತ್ತಿಕೊಂಡ ಮಕ್ಕಳ ಆಯೋಗ

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ 'ಜಸ್ಟಿಸ್ ಫಾರ್ ಕಾವ್ಯ' ಹೋರಾಟ ಸಮಿತಿಯ ದಿನಕರ್ ಶೆಟ್ಟಿ, "ಜುಲೈ 20 ರಂದು ಮೂಡಬಿದಿರೆಯ ಆಳ್ವಾಸ್ ಸಂಸ್ಥೆಯ ಹಾಸ್ಟೆಲ್ ನಲ್ಲಿ ನೇಣು ಬಿಗಿದ ರೀತಿಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿ ಕಾವ್ಯ ಸಾವು ಸಂಭವಿಸಿತ್ತು. ಈ ಘಟನೆಯ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ," ಎಂದು ಹೇಳಿದರು.

 ‘Justice For Kavya’ forum to hold jatha on August 9 in Mangaluru

ಘಟನೆ ನಡೆದು ಹನ್ನೆರಡು ದಿನಗಳು ಕಳೆದಿದೆ. ಆದರೆ ಕಾವ್ಯ ಪೂಜಾರಿ ಸಾವಿನ ಕಾರಣದ ಬಗ್ಗೆ ಸ್ಪಷ್ಟ ಮಾಹಿತಿ ದೊರೆತಿಲ್ಲ ಎಂದು ಕಿಡಿಕಾರಿದರು.

ಆಳ್ವರ ತೇಜೋವಧೆ ಖಂಡನೀಯ: ಕ್ಯಾ. ಗಣೇಶ್ ಕಾರ್ಣಿಕ್

"ಪ್ರಕರಣದ ಕುರಿತು ಪೊಲೀಸ್ ತಂಡ ತನಿಖೆ ನಡೆಸಿದೆ. ಆದರೆ ಈವರೆಗೆ ಪ್ರಕರಣದ ತನಿಖೆಯ ಮಾಹಿತಿಯನ್ನು ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಇಟ್ಟಿಲ್ಲ," ಎಂದು ದಿನಕರ್ ಶೆಟ್ಟಿ ವಿಷಾದ ವ್ಯಕ್ತಪಡಿಸಿದರು.

ಪೊಲೀಸ್ ಇಲಾಖೆಯ ಈ ನಡೆ ಅಚ್ಚರಿ ಮೂಡಿಸಿದೆ ಎಂದು ಹೇಳಿದ ಅವರು ಕಾವ್ಯಾಳ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹೋರಾಟ ತೀವ್ರಗೊಳಿಸುವ ದೃಷ್ಟಿಯಿಂದ ಆಗಸ್ಟ್ ಒಂಬತ್ತುರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು .

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
‘Justice For Kavya’ forum to hold jatha on August 9 in Mangaluru, said ‘Justice for Kavya’ forum’s Dinakar Shetty in a press meet held at Hotel Woodlands here on August 3.
Please Wait while comments are loading...