ಸರಣಿ ಅತ್ಯಾಚಾರಿ ಸೈನೈಡ್ ಮೋಹನ್ ಗೆ ಗಲ್ಲು ಶಿಕ್ಷೆ ಖಾಯಂ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 15 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಿವಾಸಿ ಸುನಂದಾ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಣಿ ಹಂತಕ ಸೈನೈಡ್ ಮೋಹನ್ ಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ಸರಣಿ ಅತ್ಯಾಚಾರಿ, ಕೊಲೆಗಾರ ಸೈನೈಡ್ ಮೋಹನ್ 4ನೇ ಕೇಸಿನಲ್ಲೂ ದೋಷಿ

ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಪ್ರಶ್ನಿಸಿ ಸೈನೈಡ್ ಮೋಹನ್ ಹೈಕೋರ್ಟ್ ಮೊರೆ ಹೋಗಿದ್ದ. ಮೋಹನ್ ನ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ್ ಮತ್ತು ನ್ಯಾಯಮೂರ್ತಿ ಕುನ್ಹಾ ಅವರ ಪೀಠ ಗಲ್ಲು ಶಿಕ್ಷೆಯನ್ನು ಖಾಯಂಗೊಳಿಸಿದೆ.

Karnataka high court upholds death sentence for serial killer Cyanide Mohan

ಕೊಲೆ ,ಅತ್ಯಾಚಾರ ,ಚಿನ್ನಾಭರಣ ಲೂಟಿ ಸೇರಿದಂತೆ 2003 ರಿಂದ 2009 ರವರೆಗೆ ಮೋಹನ್ ಮೇಲೆ ಸುಮಾರು 20 ಪ್ರಕರಣಗಳಿದ್ದು, ಈ ಪೈಕಿ ನಾಲ್ಕು ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾನೆ. ಇನ್ನು ಬೇರೆ ಮೂರು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
he Karnataka high court on Wednesday upheld the death penalty imposed upon serial killer Cyanide Mohan in relation to murder of one Sunanda , a resident of Sullia in February 2008.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ