ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಟಿಪಳ್ಳ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ 13ನೇ ಆರೋಪಿ ಸೆರೆ

|
Google Oneindia Kannada News

ಮಂಗಳೂರು, ಜುಲೈ 17 : ಕಾಟಿಪಳ್ಳದಲ್ಲಿ ನಡೆದಿದ್ದ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ಕೃಷ್ಣಾಪುರ ನಿವಾಸಿ ಸಫ್ವಾನ್ ಅಲಿಯಾಸ್ ಚಪ್ಪು (23) ಬಂಧಿತ.

ಕಳೆದ ಜನವರಿ 3ರಂದು ಮಧ್ಯಾಹ್ನ ಮಂಗಳೂರಿನ ಕಾಟಿಪಳ್ಳದ 2ನೇ ಬ್ಲಾಕ್ ನಲ್ಲಿ ಅಬ್ದುಲ್ ಮಜೀದ್ ಎಂಬುವವರ ಮನೆಯ ಎದುರು ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ರನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿ, ಆ ನಂತರ ಪರಾರಿಯಾಗಿತ್ತು.

ದೀಪಕ್ ರಾವ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ ದೀಪಕ್ ರಾವ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

ಬಿಜೆಪಿ ಕಾರ್ಯಕರ್ತರಾಗಿದ್ದ ದೀಪಕ್ ರಾವ್ ಹತ್ಯೆ ಪ್ರಕರಣ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ರಾಜಕೀಯ ಆರೋಪ- ಪ್ರತ್ಯಾರೋಪಕ್ಕೂ ಕಾರಣವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ್ದ ಮಂಗಳೂರು ಪೊಲೀಸರು, 12 ಆರೋಪಿಗಳನ್ನು ಬಂಧಿಸಿದ್ದರು. ಆ ಸಂದರ್ಭದಲ್ಲಿ ಸಫ್ವಾನ್ ತಲೆ ಮರೆಸಿಕೊಂಡಿದ್ದ.

Katipalla Deepak Rao murder case: 13th accused arrested

ಕೊಲೆ ಪ್ರಕರಣದ ಪ್ರಮುಖ ಅರೋಪಿ ಸಫ್ವಾನ್ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ನಗರದ ಸುರತ್ಕಲ್ ನ ಮುಕ್ಕ ಬಳಿ ಮನೆಯೊಂದಲ್ಲಿ ಅಡಗಿದ್ದ ಆತನನ್ನು ಬಂಧಿಸಿದ್ದಾರೆ. ಆ ಮೂಲಕ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13ಕ್ಕೆ ಏರಿದೆ.

English summary
Safton alias Chappu, resident of Suratkal, Krishnapura 13th accused in Katipalla Deepak Rao murder case arrested by Mangaluru police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X