ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಗೆ ಹೀನಾಯ ಪರಿಸ್ಥಿತಿ: ಖಾದರ್ ನೀಡಿದ ಕಾರಣವೇನು?

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 03: ಉಳ್ಳಾಲ ನಗರಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಯು.ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಳ್ಳಾಲದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ವಿಮರ್ಶೆ ನಡೆಸಲಾಗುತ್ತಿದೆ. ಉಳ್ಳಾಲ ನಗರಸಭೆಗೆ ನಡೆದ ಚುನಾವಣೆಯಲ್ಲಿ ಜನ‌ ಅವರ ತೀರ್ಪು ನೀಡಿದ್ದಾರೆ. ಜನ ಯಾರಿಗೂ ಸ್ಪಷ್ಟ ಬಹುಮತವನ್ನು ನೀಡಿಲ್ಲ. ಉಳ್ಳಾಲದಲ್ಲಿ ಕಾಂಗ್ರೆಸ್ ನಿರೀಕ್ಷಿಸಿದಷ್ಟು ಸ್ಥಾನ ಬಂದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪುತ್ತೂರು ನಗರಸಭೆ ಬಿಜೆಪಿ ತೆಕ್ಕೆಗೆ, ಖಾತೆ ತೆರೆದ ಎಸ್ ಡಿಪಿಐ ಪುತ್ತೂರು ನಗರಸಭೆ ಬಿಜೆಪಿ ತೆಕ್ಕೆಗೆ, ಖಾತೆ ತೆರೆದ ಎಸ್ ಡಿಪಿಐ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಯಾಗಿರುವುದರಲ್ಲಿ ಪಕ್ಷದ ಕೆಲವು ನ್ಯೂನತೆ ಕಾರಣ ಇರಬಹುದು. ಪಕ್ಷದ ಹಿನ್ನಡೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಉಳ್ಳಾಲದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನ ಲಭ್ಯವಾಗಿಲ್ಲ.

Khader Say People have not given a clear majority to anyone

ಹಾಗಂತ ಪಕ್ಷಕ್ಕೆ ಅಧಿಕಾರ ಇಲ್ಲದಿದ್ದರೂ, ಚಿಂತೆ ಇಲ್ಲ. ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳದವರ ಜೊತೆ ಸೇರಿ ಅಧಿಕಾರ ನಡೆಸಲ್ಲ. ಉಳ್ಳಾಲ ನಗರಸಭೆ ಗೆ ಸಂಬಂಧಿಸಿದಂತೆ ಎಸ್ ಡಿಪಿಐ ಜೊತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪುತ್ತೂರು ನಗರಸಭೆ ಬಿಜೆಪಿ ತೆಕ್ಕೆಗೆ, ಉಳ್ಳಾಲ, ಬಂಟ್ವಾಳದಲ್ಲಿ ಅತಂತ್ರ, ಕೈಗೆ ಮುಖಭಂಗ ಪುತ್ತೂರು ನಗರಸಭೆ ಬಿಜೆಪಿ ತೆಕ್ಕೆಗೆ, ಉಳ್ಳಾಲ, ಬಂಟ್ವಾಳದಲ್ಲಿ ಅತಂತ್ರ, ಕೈಗೆ ಮುಖಭಂಗ

ಬಂಟ್ವಾಳ ಪುರಸಭೆಯಲ್ಲಿಯೂ ಅತಂತ್ರ ಸ್ಥಿತಿ ಇದೆ. ಇಲ್ಲಿ ಯಾವ ರೀತಿ ? ಯಾರೊಂದಿಗೆ ಹೊಂದಾಣಿಕೆ? ಮೈತ್ರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹಿರಿಯರೊಡನೆ ಕುಳಿತು ನಿರ್ಣಯ ಕೈಗೊಳ್ಳಲಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ದೇವೇಗೌಡ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ದೇವೇಗೌಡ

ಬಂಟ್ವಾಳದಲ್ಲಿ ಎಸ್ ಡಿ ಪಿ ಐ ನಿರ್ಣಾಯಕ ಆಗಿದ್ದು ಬಿಜೆಪಿ ಅಥವಾ ಕಾಂಗ್ರೆಸ್ ಗೆ ಅಧಿಕಾರಕ್ಕೆ ಬೇಕಿದ್ದರೆ ಮೈತ್ರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಖಾದರ್ ತಿಳಿಸಿದರು.

English summary
Minister UT Khader Said People have not given a clear majority to anyone.In Ullal, Congress has not got as much as expected
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X