ಚಿತ್ರಗಳು : ಮಂಗಳೂರಿನಲ್ಲಿ ಟ್ಯಾಂಕರ್ ಪಲ್ಟಿ, ಹೆದ್ದಾರಿ ಬಂದ್

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಏಪ್ರಿಲ್ 19 : ಎಚ್ ಪಿ ಕಂಪನಿಗೆ ಸೇರಿದ ಗ್ಯಾಸ್ ಟ್ಯಾಂಕರ್ ಬಂಟ್ವಾಳ ಸಮೀಪ ಪಲ್ಟಿಯಾಗಿದೆ. ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, 10 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿವೆ.

ಬಂಟ್ವಾಳ ತಾಲೂಕಿನ ಸೂರಿಕುಮೇರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ತಡರಾತ್ರಿ ಟ್ಯಾಂಕರ್ ಪಲ್ಟಿಯಾಗಿದೆ. ಬಂಟ್ವಾಳ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. [ಅಡುಗೆ ಅನಿಲ ಸಿಲಿಂಡರ್ ದರ ಇಳಿಕೆ, ಜೆಟ್ ಇಂಧನ ಏರಿಕೆ]

lpg tanker

ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. 10 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತೆರಳಿವೆ. ಎಚ್ ಪಿ ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. [ಪತಿ, ಪತ್ನಿ ಆದಾಯ 10 ಲಕ್ಷ ಇದ್ದರೆ LPG ಸಬ್ಸಿಡಿ ಇಲ್ಲ]

ಟ್ಯಾಂಕರ್ ಪಲ್ಟಿಯಾದ ಸ್ಥಳದಿಂದ 3 ಕಿ.ಮೀ. ಸುತ್ತ-ಮುತ್ತ ವಾಹನ ಸಂಚಾರ ಮತ್ತು ಜನರ ಓಡಾಟವನ್ನು ನಿಷೇಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸೂರಿಕುಮೇರು ಗ್ರಾಮದ ಜನರನ್ನು ಸ್ಥಳಾಂತರ ಮಾಡಲಾಗುತ್ತಿದೆ. ಅಧಿಕಾರಿಗಳು ಟ್ಯಾಂಕರ್‌ನಿಂದ ಗ್ಯಾಸ್ ಸೋರಿಗೆ ಆಗುವುದನ್ನು ತಡೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.

-
-
-
-

ಏಪ್ರಿಲ್ 2ರಂದು ಉಪ್ಪಿನಂಗಡಿ ಸಮೀಪದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿತ್ತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಹಲವು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
LPG gas tanker overturned near Surukumeru near Bantwal, Mangaluru on Tuesday, April 19, 2016. Bengaluru-Mangaluru highway traffic diverted after tanker overturned.
Please Wait while comments are loading...