ಟ್ಯಾಂಕರ್ ಪಲ್ಟಿ : ಬೆಂಗಳೂರು-ಮಂಗಳೂರು ಹೆದ್ದಾರಿ ಬಂದ್

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಏಪ್ರಿಲ್ 02 : ಉಪ್ಪಿನಂಗಡಿ ಸಮೀಪದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ಶನಿವಾರ ಬೆಳಗ್ಗೆ ಉಪ್ಪಿನಂಗಡಿ ಸಮೀಪದ ಪೆರ್ನೆ ಎಂಬಲ್ಲಿ ಚಾಲಕ ನಿಯಂತ್ರಣ ತಪ್ಪಿದ ಟ್ಯಾಂಕರ್ ಪಲ್ಟಿಯಾಗಿದೆ. ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿದೆ. ಎಂಆರ್‌ಪಿಎಲ್‌ ಮತ್ತು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. [ಏ.4ರಿಂದ ಶಿರಾಡಿ ಘಾಟ್ ರಸ್ತೆ ಕಾಮಗಾರಿ ಮತ್ತೆ ಆರಂಭ]

lpg tanker

ಟ್ಯಾಂಕರ್ ಪಲ್ಟಿಯಾದ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ಬಂದ್ ಮಾಡಲಾಗಿದೆ. ವಾಹನಗಳು ಪರ್ಯಾಯ ಮಾರ್ಗವಾದ ಶಾಂತಿನಗರ-ಕರ್ವೇಲು, ದೋರ್ಮೆ-ಮಠಂತಬೆಟ್ಟು- ವಿನಾಯಕನಗರ, ಪೆರ್ನೆ-ಸೇಡಿಯಾಪು ರಸ್ತೆಯಲ್ಲಿ ಸಂಚಾರ ನಡೆಸುತ್ತಿವೆ. [ಅಡುಗೆ ಅನಿಲ ಸಿಲಿಂಡರ್ ದರ ಇಳಿಕೆ, ಜೆಟ್ ಇಂಧನ ಏರಿಕೆ]

ಹೊನ್ನಾವರದಲ್ಲಿ ಟ್ಯಾಂಕರ್ ಪಲ್ಟಿ : ಶನಿವಾರ ಬೆಳಗ್ಗೆ ಹೊನ್ನಾವರ ಪಟ್ಟಣದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಗೆ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಟ್ಯಾಂಕರ್ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
LPG gas tanker overturned near Uppinangady, Mangaluru on Saturday, April 2, 2016. Bengaluru-Mangaluru highway traffic diverted after tanker overturned.
Please Wait while comments are loading...