ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಹುಮತ ಸಾಬೀತು: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

|
Google Oneindia Kannada News

ಮಂಗಳೂರು ಮೇ 18: ಬೆಂಗಳೂರಿನ ವಿಧಾನ ಸೌಧದಲ್ಲಿ ನಾಳೆ ನೂತನ ಸರಕಾರದ ವಿಶ್ವಾಸ ಮತ ಯಾಚನೆ ನಡೆಯಲಿದೆ . ಈ ಕುರಿತು ದೇಶಾದ್ಯಂತ ಭಾರೀ ಕುತುಹಲ ವ್ಯಕ್ತವಾಗಿದೆ. ಈ ವಿಶ್ವಾಸ ಮತ ಯಾಚನೆಯ ಬಿಸಿ ಮಂಗಳೂರಿಗೂ ತಟ್ಟಿದೆ.

ರಾಜ್ಯದಲ್ಲಿ ನಾಳೆ ಹೊಸ ಸರಕಾರ ವಿಶ್ವಾಸ ಮತ ಯಾಚನೆ ಕಸರತ್ತು ನಡೆಯುವ ಸಂದರ್ಭ ಮಂಗಳೂರಿನಲ್ಲಿ ರಾಜಕೀಯ ಘರ್ಷಣೆಯಾಗುವ ಆತಂಕದ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಾಳೆ ಮುಂಜಾನೆ ಯಿಂದ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Majority prove Section 144 imposed in Mangaluru

ಮಂಗಳೂರು ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ನಿಷೇಧಾಜ್ಞೆ ಜಾರಿಮಾಡಿ ಆದೇಶ ಹೊರಡಿಸಿದ್ದು, ನಾಳೆ ಮುಂಜಾನೆ 8 ಗಂಟೆ ಯಿಂದ ಮೇ 20 ಬೆಳಿಗ್ಗೆ 10 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ನಾಳೆ ವಿಧಾನ ಸೌಧದಲದಲಿ ಬಿಜೆಪಿ, ಕಾಂಗ್ರೇಸ್ ಹಾಗೂ ಜೆಡಿಎಸ್ ವಿಶ್ವಾಸ ಮತ ಪರೀಕ್ಷೆಗೆ ಒಳಪಡಲಿವೆ. ಈ ಕುರಿತು ಈಗಾಗಲೇ ರಾಜ್ಯಾದ್ಯಂತ ಪರ ವಿರೋಧ ಚರ್ಚೆ, ಅನಿಸಿಕೆಗಳು ವ್ಯಕ್ತವಾಗುತ್ತಿವೆ. ಈ ವಿರೋಧ ,ಭಿನ್ನಾಭಿಪ್ರಾಯಗಳು ಘರ್ಷಣೆಗೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಈ ಕಾರಣ ಮಂಗಳೂರಿನಲ್ಲಿಯೂ ರಾಜಕೀಯ ಘರ್ಷಣೆ ನಡೆಯುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಷೇಧಾಜ್ಞೆ ಅನ್ವಯ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ರಸ್ತೆ, ಬೀದಿ, ಓಣಿ , ಕೆರಿಗಳಲ್ಲಿ , ಸಾರ್ವಜನಿಕ ಕಟ್ಟಡ ಮತ್ತು ಸರಕಾರಿ ಕಟ್ಟಡ ಕಚೇರಿ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ನಾಳೆ ಯಾವುದೇ ರೀತಿಯ ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ , ರಾಜಕೀಯ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಲಾಗಿದೆ. ಪಟಾಕಿ ಸಿಡಿಸುವುದು , ಅಥವಾ ಇನ್ನಿತರ ಸ್ಪೋಟಕ ವಸ್ತುಗಳನ್ನು ಸಿಡಿಸುವುದನ್ನು ಅಥವಾ ಹೊಂದಿರುವುದನ್ನು ಸೆಕ್ಷನ್ 144 ಅನ್ವಯ ನಿಷೇಧಿಸಲಾಗಿದೆ.

English summary
Karnataka state assembly election 2018: To control the law and order situation in Mangauru section 144 imposed in Mangaluru police commissioner by the Mangaluru police Commissioner Vipul Kumar on May 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X