ಕುಕ್ಕೆ ಸುಬ್ರಹ್ಮಣ್ಯ ದರ್ಶನ ಪಡೆದ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್

Posted By:
Subscribe to Oneindia Kannada

ಮಂಗಳೂರು, ಫೆಬ್ರವರಿ 15: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ಸುಬ್ರಹ್ಮಣ್ಯ ದೇವಾಲಯಕ್ಕೆ ಆಗಮಿಸಿ, ದೇವರ ದರ್ಶನ ಪಡೆದ ಮೋಹನ್ ಲಾಲ್ ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ಶೀಘ್ರದಲ್ಲೇ ಆಲ್ಕೋಹಾಲ್ ಮುಕ್ತ!

ಮಲಯಾಳಂನ ಬಹುನಿರೀಕ್ಷಿತ ಕಾಯಂಕುಳಂ ಕೊಚ್ಚುನ್ನಿ ಚಿತ್ರದ ಚಿತ್ರೀಕರಣ ಪುತ್ತೂರು ತಾಲೂಕಿನ ಕಡಬದ ಬಲ್ಯ ಹಾಗೂ ಪದವು ಎಂಬಲ್ಲಿ ನಡೆಯುತ್ತಿದ್ದು, ಚಿತ್ರದಲ್ಲಿ ನಿವಿನ್ ಪೌಲ್, ಪ್ರಿಯಾ ಆನಂದ್ ಮತ್ತು ಮೋಹನ್ ಲಾಲ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Malayalam super star Mohanlal visits Kukke Subrahmanya temple

ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಿರುವ ಹಿನ್ನೆಲೆಯಲ್ಲಿ ಮೋಹನ್ ಲಾಲ್ ಸಹ ನಟರೊಂದಿಗೆ ಗುರುವಾರ ಸುಬ್ರಹ್ಮಣ್ಯನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮೋಹನ್ ಲಾಲ್‌ ಅಭಿಮಾನಿಗಳು‌ ನೆಚ್ಚಿನ ನಟನೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

Malayalam super star Mohanlal visits Kukke Subrahmanya temple

ಇನ್ನೊಂದೆಡೆ ಬಹುಕೋಟಿ ವೆಚ್ಚದ ಮಮ್ಮುಟಿ ನಟನೆಯ ಮಾಮಾಂಗಂ ಚಿತ್ರದ ಚಿತ್ರೀಕರಣ ಕೂಡಾ ಕಡಬದ ಕೊಯಿಲ ಫಾರ್ಮ್ ನಲ್ಲಿ ನಡೆಯುತ್ತಿದ್ದು, ಎರಡೂ ಚಿತ್ರದ ‌ನಟರಿಗೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

Malayalam super star Mohanlal visits Kukke Subrahmanya temple

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Malayam super star Mohanlal visits Kukke Subrahmanya temple on Thursday. Mohanlal is residing at Kukke Subrahmanya for his upcoming movie shooting.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ