ಮಂಗಳೂರು: ಫೇಸ್ಬುಕ್ ನಲ್ಲಿ ಅಶ್ಲೀಲ ಪೋಸ್ಟ್, ಆರೋಪಿ ಬಂಧನ

Posted By:
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 12 : ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ವೀಲ ಚಿತ್ರ ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಅರೋಪಿಯನ್ನು ಮಂಗಳವಾರ ಕಂಕನಾಡಿ ನಗರ ಪೋಲಿಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ರವಿನಾಯ್ಕ್ ಬಂಧಿಸಿದ್ದಾರೆ.

ಬಂಧಿತನನ್ನು ಛತ್ತೀಸಗಢದ ತೋರಾನ್ ಲಾಲ್ ರಾವಟೆ ಎಂದು ಗುರುತ್ತಿಸಲಾಗಿದೆ. ಮಂಗಳೂರಿನ ಯೆಯ್ಯಾಡಿಯಲ್ಲಿ ಕಾರ್ಮಿಕನಾಗಿರುವ ರಾವಟೆ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಅನಾಮಧೇಯ ವ್ಯಕ್ತಿಗಳ ಭಾವ ಚಿತ್ರಗಳನ್ನು ಮತ್ತು ಅಶ್ಲೀಲ ಸಂದೇಶಗಳನ್ನು ಹಾಕುವ ಕುಕೃತ್ಯಗಳನ್ನು ಮಾಡುತ್ತಿದ್ದ ಎಂದು ಪೋಲಿಸರು ತಿಳಿಸಿದ್ದಾರೆ.

Man arrested for creating fake FB account and posting obscene photos in Mangaluru

ಆರೋಪಿಯ ವಿರುದ್ದ ಅಪರಾಧ ಕ್ರಮಾಂಕ 146/11 ಕಲಂ 66 ಎಐಟಿ ಕಾಯ್ದೆಯಡಿಯಲ್ಲಿ ಮೊಕದ್ದಮೆ ದಾಖಲಿಸಿ ಅರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Man arrested for creating fake FB account and posting obscene photos in Mangaluru on 12. The arrested is identified as Toran Lal Ravate (23), son of Dhan singh Ravate, residing in ward No. 9 of Pateli village, Ambagarh Chowki, Rajnandgaon district, Chhattisgarh. On being produced in court, the accused was remanded to judicial custody.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ