ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್. 26: ಕಾಲೇಜಿನಲ್ಲಿ ನೀಡಿದ ಅತಿಯಾದ ಶಿಕ್ಷೆಗೆ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿ ನೆವಿಲ್ ಫೆರ್ನಾಂಡೀಸ್ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ.

ಮೊದಲನೇ ವರ್ಷದ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗೋವಾ ಮೂಲದ ನೆವಿಲ್ ಫೆರ್ನಾಂಡೀಸ್ ಕಾಲೇಜಿನಲ್ಲಿ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಕ್ಕೆ ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿತ್ತು. ನೆವಿಲ್ ಜತೆ ವಿದ್ಯಾರ್ಥಿನಿಯನ್ನೂ ಕಾಲೇಜು ಆಡಳಿತ ಮಂಡಳಿ ಸಸ್ಪೆಂಡ್ ಮಾಡಿತ್ತು.

ಗೆಳತಿಯೊಂದಿಗೆ ಕಲಹ: ಲಿವಿಂಗ್ ಟುಗೆದರ್ ನಲ್ಲಿದ್ದ ಟೆಕ್ಕಿ ಆತ್ಮಹತ್ಯೆಗೆಳತಿಯೊಂದಿಗೆ ಕಲಹ: ಲಿವಿಂಗ್ ಟುಗೆದರ್ ನಲ್ಲಿದ್ದ ಟೆಕ್ಕಿ ಆತ್ಮಹತ್ಯೆ

ಇದರಿಂದ ಮನನೊಂದ ವಿದ್ಯಾರ್ಥಿ ಅವಮಾನ ತಾಳಲಾರದೇ ಉರ್ವಾದಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಶರಣಾಗುವ ಮೊದಲು ನೆವಿಲ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾನೆ ಎಂದು ಹೇಳಲಾಗಿದೆ.

Managluru Expert Pu College student commits suicide

ಡೆತ್ ನೋಟನ್ನು ಉರ್ವಾಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದು, ಪರಿಶೀಲನೆ ನಡೆಸಿದ್ದಾರೆ. ಆದರೆ ವಿದ್ಯಾರ್ಥಿಯ ಪೋಷಕರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲ್ಲ. ಡೆತ್ ನೋಟ್ ಆಧಾರದ ಮೇಲೆ ಉರ್ವಾ ಠಾಣೆಯ ಪೊಲೀಸರೇ ಸುಮೊಟೊ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಬಹುದಾಗಿದೆ.

ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಮಣಿಪಾಲದ ಬಿಲ್ಡರ್ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಮಣಿಪಾಲದ ಬಿಲ್ಡರ್

ಆದರೆ ಪೊಲೀಸರು ಈ ರೀತಿ ಮಾಡದಿರುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಪ್ರಕರಣ ದಾಖಲಿಸದಂತೆ ಪೊಲೀಸರ ಮೇಲೆ ಒತ್ತಾಯ ಹಾಕಲಾಗುತ್ತಿದೆ ಎಂದು ಹೇಳಲಾಗಿದೆ.

English summary
Neville Frenandes a student of Expert Pu college had committed suicide in his home at Urva, It is said that punishment given to him in the college main reason for suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X