ಮಂಗಳೂರು: ಅಧಿಕ ಮಾತ್ರೆ ಸೇವನೆಯಿಂದ ಅಸ್ವಸ್ಥಗೊಂಡ ಕೈದಿ ಆಸ್ಪತ್ರೆಗೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಮೇ 18 : ಅಧಿಕ ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಮಂಗಳೂರು ಜಿಲ್ಲಾ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣವೊಂದರಲ್ಲಿ ಬಂಧಿತನಾಗಿರುವ ಆರೋಪಿ ಎಚ್ ಐ ವಿ ಪೀಡಿತನಾಗಿದ್ದರಿಂದ ಕೈದಿ ಮಾತ್ರೆಗಳನ್ನು ಸೇವಿಸುತ್ತಿದ್ದ. ಆದರೆ, ಬುಧವಾರ ಈತ ಹೆಚ್ಚಿನ ಪ್ರಮಾಣದಲ್ಲಿ ಮಾತ್ರೆಗಳನ್ನು ಸೇವಿಸಿದ್ದಾನೆ ಎನ್ನಲಾಗಿದೆ. ಇದರಿಂದ ಅಸ್ವಸ್ಥಗೊಡಿದ್ದು, ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾರಾಗೃಹದ ಅಧೀಕ್ಷಕ ಕೃಷ್ಣಮೂರ್ತಿ ತಿಳಿಸಿದ್ದಾರೆ.

Mangaluru, Accused admitted to hospital for consumes too much of tablets

ಆರೋಪಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನವಾಗಿ ಹೆಚ್ಚು ಮಾತ್ರೆಗಳನ್ನು ಸೇವಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿ ಹೆಸರು ಬಹಿರಂಗ ಪಡಿಸದಂತೆ ಕಾರಾಗೃಹದ ಅಧೀಕ್ಷಕ ಕೃಷ್ಣಮೂರ್ತಿ ಅವರು ಹೇಳಿದ್ದರಿಂದ ಕೈದಿಯ ಹೆಸರನ್ನು ಇಲ್ಲಿ ನಮೂದಿಸಲಾಗಿಲ್ಲ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
One of the accused in the mangaluru jail is said to have HIV and consumed too many tablets to end is life and now is admitted in the hospital.
Please Wait while comments are loading...