ಮಂಗಳೂರು: ಸಿರಿಯಲ್ ಕಿಲ್ಲರ್ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ

Posted By:
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 15 : ದೇಶವನ್ನೇ ಬೆಚ್ಚಿ ಬೀಳಿಸಿದ ಸಿರಿಯಲ್ ಕಿಲ್ಲರ್ ಹಾಗು ಸರಣಿ ಅತ್ಯಾಚಾರ ಪ್ರಕರಣಗಳ ಆರೋಪಿ ಸೈನೈಡ್ ಮೋಹನ್ ನ 4ನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಸರಣಿ ಅತ್ಯಾಚಾರಿ, ಕೊಲೆಗಾರ ಸೈನೈಡ್ ಮೋಹನ್ 4ನೇ ಕೇಸಿನಲ್ಲೂ ದೋಷಿ

ವೇಳೆ ಕೊಲೆ ,ಅತ್ಯಾಚಾರ ,ಚಿನ್ನಾಭರಣ ಲೂಟಿ , ಸೈನೆಡ್ ನೀಡಿರುವುದು ಹಾಗೂ ಸಾಕ್ಷಿ ನಾಶ ಮಾಡಿರುವ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಸೆಕ್ಷನ್ 302 ರ ಅಡಿಯಲ್ಲಿ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ ಹಾಗೂ 26 ಸಾವಿರ ರು. ದಂಡ ವಿಧಿಸಿ ನ್ಯಾಯಾಧೀಶ ಡಿ. ಟಿ ಪುಟ್ಟರಂಗ ಸ್ವಾಮಿ ಅವರು ಆದೇಶ ಹೊರಡಿಸಿದರು.

Mangaluru: After three death sentences, Cyanide Mohan awarded life imprisonment

ಪುತ್ತೂರು ತಾಲೂಕಿನ ಪಟ್ಟೆಮಜಲು ಎಂಬಲ್ಲಿನ 22 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ನಾಲ್ಕನೇ ಪ್ರಕರಣದಲ್ಲೂ ಸೆನೈಡ್ ಮೋಹನ್ ದೋಷಿ ಎಂದು ಘೋಷಿಸಿ ಶಿಕ್ಷೆ ಪ್ರಮಾಣವನ್ನು ಸೆ.15ಕ್ಕೆ ಮುಂದೂಡಿತ್ತು.

ಪಟ್ಟೆಮಜಲಿನ ಬೀಡಿ ಕಟ್ಟುವ ಯುವತಿಯನ್ನು ಮೋಹನ, ತನ್ನ ಹೆಸರು ಆನಂದ್ ಎಂದು ಹೇಳಿ ಪರಿಚಯಿಸಿಕೊಂಡಿದ್ದ. ನಂತರ ಮೊಬೈಲ್ ನಂಬರ್ ಪಡೆದುಕೊಂಡು ಸಂಪರ್ಕ ಬೆಳೆಸಿದ್ದ. ಆಕೆಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿದ್ದ.

ನಂತರ ಆಕೆಯನ್ನು 17-9-2009ರಂದು ಪುತ್ತೂರಿನ ಬಸ್ ನಿಲ್ದಾಣಕ್ಕೆ ಒಡವೆ ಹಾಕಿಕೊಂಡು ಬಾ ಎಂದು ನಂಬಿಸಿ. ಇಬ್ಬರೂ ಮಡಿಕೇರಿಗೆ ಹೋಗಿ ಅಲ್ಲಿನ ವಸತಿ ನಿಲಯದಲ್ಲಿ ತಂಗಿದ್ದರು. ಯುವತಿಯೊಡನೆ ಲೈಂಗಿಕ ಸಂಪರ್ಕ ನಡೆಸಿ ಇದರಿಂದ ಗರ್ಭ ಧರಿಸುವ ಸಾಧ್ಯತೆ ಇದೆ ಹಾಗಾಗಿ ನಾನು ಕೊಡುವ ಗುಳಿಗೆ ತಿಂದರೆ ಗರ್ಭ ನಿಲ್ಲುವುದಿಲ್ಲ ಎಂದು ಸೈನೈಡ್ ನೀಡಿದ್ದ.

ಅದನ್ನು ತಿಂದು ಯುವತಿ ಶೌಚಾಲಯದಲ್ಲಿ ಮೃತಪಟ್ಟ ಬಳಿಕ. ಆಕೆಯ ಬಳಿ ಇದ್ದ ಚಿನ್ನ, ಮೊಬೈಲ್‍ನೊಂದಿಗೆ ಮೋಹನ್ ಪರಾರಿಯಾಗಿದ್ದ. ಮಡಿಕೇರಿಯಲ್ಲಿ ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಾಗಿತ್ತು.

ಬಂಟ್ವಾಳದ ಬರಿಮಾರಿನ ಯುವತಿಯ ಕೊಲೆ ಪ್ರಕರಣದ ಪತ್ತೆಯೊಂದಿಗೆ ಸೆನೈಡ್ ಮೋಹನನ ಸರಣಿ ಹತ್ಯೆ ವಿಚಾರ ಬಯಲಾಗಿತ್ತು. ಸೈನೈಡ್ ಮೋಹನನ ಬಂಧನದೊಂದಿಗೆ ಇತರ ಪ್ರಕರಣಗಳೂ ಬೆಳಕಿಗೆ ಬಂದಿದ್ದವು. ಆತನ ಮನೆ ಶೋಧದ ವೇಳೆ ಪಟ್ಟೆಮಜಲಿನ ಯುವತಿಯ ಮೊಬೈಲ್ ಕೂಡಾ ಪತ್ತೆಯಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The sixth additional district court awarded life imprisonment and a fine of Rs 26,000 to Cyanide Mohan in the rape and murder of a young woman in Puttur taluk. Holding Mohan guilty of murder, rape, looting jewelry and destruction of evidence, Judge DP Putturangaswamy sentenced Mohan to life imprisonment which gave justice to the family of the woman after eight long years.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ