ದೀಪಕ್ ಹತ್ಯೆಯಲ್ಲಿ ಬಿಜೆಪಿ ಕೈವಾಡ: ಎಚ್ಡಿಕೆ ವಿರುದ್ಧ ದೂರು ದಾಖಲು

Posted By:
Subscribe to Oneindia Kannada

ಮಂಗಳೂರು, ಜನವರಿ 09 : ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೊರೇಟರ್ ಕೈವಾಡ ಇದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಡಾ.ವೈ.ಭರತ್ ಶೆಟ್ಟಿ ಅವರು ಎಚ್.ಡಿ.ಕುಮಾರಸ್ವಾಮಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದಾರೆ.

ದೀಪಕ್ ರಾವ್ ಹತ್ಯೆಯಲ್ಲಿ ಬಿಜೆಪಿ ಕಾರ್ಪೊರೇಟರ್ ಕೈವಾಡ: ಎಚ್ಡಿಕೆ

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡದ ವೈ.ಭರತ್ ಶೆಟ್ಟಿ "ದೀಪಕ್ ಕೇಸ್ ನಲ್ಲಿ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಹತ್ಯೆಯಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಅಂತ ಆರೋಪಿಸಿದ್ದಾರೆ. ಹೀಗಾಗಿ ಬಿಜೆಪಿ ಇವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.

 Mangaluru BJP youth leader Dr Bharat files One Crore Defamation against HDK

ಕುಮಾರಸ್ವಾಮಿ ವಿರುದ್ದ ಒಂದು ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ. ಇದಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಕಾರ್ಪೋರೇಟರ್ ಕೈವಾಡವಿದೆ ಎಂದು ನಿನ್ನೆ ಮೈಸೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದರು. ಇದಕ್ಕೆ ಬಿಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಬಳಿಕ ಪ್ರತಿಕ್ರಿಯಿಸಿದ ಎಚ್ ಡಿಕೆ, "ಯಾರೋ ಒಬ್ಬ ವ್ಯಕ್ತಿಯ ಮೇಲೆ ನಾನು ಆರೋಪ ಹೊರಿಸಿಲ್ಲ. ನಮಗಿರುವ ಮಾಹಿತಿಯನ್ನು ನಾನು ಹೇಳಿದ್ದೇನೆ. ಆತನ ಹೆಸರನ್ನು ನಾನೇಕೆ ಹೇಳಲಿ. ಸರ್ಕಾರವೇ ತನಿಖೆ ಮಾಡಿ ಯಾರು ಎಂಬುದನ್ನು ಕಂಡು ಹಿಡಿಯಲಿ ಎಂದು ಸ್ಪಷ್ಟನೆ ನೀಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Being in a responsible position JD(S) state president HD Kumaraswamy has given an immature statement in the Deepak Rao Murder case targeting the BJP leader. In this connection I have filed a Rs one crore defamation case against H D Kumaraswamy in the Mangaluru Court”, said the President of BJP Mangaluru North Dr Bharat Shetty in a press meet held at the BJP office here on January 9.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ