ಕೇರಳದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

By: ಮಂಗಳೂರು ಪ್ರತಿನಿಧಿ
Subscribe to Oneindia Kannada
ಮಂಗಳೂರು, ಫೆಬ್ರವರಿ. 16 : ಕೇರಳದಿಂದ ಮಂಗಳೂರು ನಗರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ರಾತ್ರಿ ಬಂಧಿಸಿದ್ದಾರೆ.

ಮಂಗಳೂರು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕಾಪಿಕಾಡ್ ರಸ್ತೆಯ ಸುರಭಿ ಹೊಟೇಲ್ ಮುಂಭಾಗದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಬಂಧಿಸಿದ್ದಾರೆ.

ಅಬ್ದುಲ್ ಅಂಸಾದ್ ಸಿ ಎಚ್, ಉದಯ ಕುಮಾರ್ ರೈ ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 5 ಕೆಜಿ ಗಾಂಜಾ, 3 ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು 1,66,000 ರು. ಮೌಲ್ಯದ ಸರಕನ್ನು ವಶಪಡಿಸಿಕೊಂಡಿದ್ದಾರೆ.

Mangaluru CCB police seize 5 kg ganja two arrested

ಈ ಗಾಂಜಾವನ್ನು ಆರೋಪಿಗಳು ಕೇರಳ ಇಡುಕ್ಕಿ ಜಿಲ್ಲೆಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿದ್ದರು.

ಆರೋಪಿಗಳ ಪೈಕಿ ಉದಯ ಕುಮಾರ್ ರೈ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಮಂಗಳೂರು ಪೂರ್ವ, ಬರ್ಕೆ, ಬಜಪೆ ಪೊಲೀಸ್ ಠಾಣೆಗಳಲ್ಲಿ ಹಾಗೂ ಕಾಸರಗೋಡು ಪೊಲೀಸ್ ಠಾಣೆಗಳಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

ಸಿಸಿವಿ ಪೊಲೀಸರು ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಗಾಂಜಾವನ್ನು ಮುಂದಿನ ಕ್ರಮಕ್ಕಾಗಿ ಉರ್ವಾ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mangaluru CCB police arrested two persons in connection with selling ganja at Urwa police station surround Mangaluru on February 15 late night. Ganja worth RS 1 lakh more seized.
Please Wait while comments are loading...