ಚೈಲ್ಡ್ ಲೈನ್ ನಿಂದ ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಯ ರಕ್ಷಣೆ

Posted By:
Subscribe to Oneindia Kannada

ಮಂಗಳೂರು, ಅಕ್ಟೋಬರ್ 11: ಅಪ್ರಾಪ್ತ ಬಾಲಕಿಯೊಬ್ಬಳನ್ನು ಮನೆ ಕೆಲಸಕ್ಕೆ ಬಳಸುತ್ತಿರುವ ಮಾಹಿತಿ ಕಲೆ ಹಾಕಿ ಚೈಲ್ಡ್ ಲೈನ್ ಸದಸ್ಯರು ಬಾಲಕಿಯನ್ನು ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಹತ್ತು ವರ್ಷದ ಬಾಲಕಿಯನ್ನು ಮನೆ ಕೆಲಸಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಚೈಲ್ಡ್ ಲೈನ್ ಸದಸ್ಯರು ಪೊಲೀಸರ ನೆರವಿನೊಂದಿಗೆ ನಗರದ ಪಾಂಡೇಶ್ವರ ಎಂಬಲ್ಲಿನ ಮನೆಯೊಂದರ ಮೇಲೆ ದಾಳಿ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ.

Mangaluru: Child line team rescued teenage girl from a home

ಮಹಮ್ಮದ್ ಎಂಬುವವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಪತ್ತೆಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿಯನ್ನು ಚೈಲ್ಡ್ ಲೈನ್ ಸದಸ್ಯರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಮನೆ ಕೆಲಸಕ್ಕೆ ಬಳಸಿಕೊಂಡ ಆರೋಪದ ಮೇಲೆ ಮನೆಯ ಮಾಲಿಕ ಮಹಮ್ಮದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಚೈಲ್ಡ್ ಲೈನ್ ಪದಾಧಿಕಾರಿಗಳ ದೂರಿನ ಅನ್ವಯ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Child Line team rescued teenage girl working at home here in Pandeshwara, Mangaluru. It is said that the girl is a resident of Shimoga age is 10

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ