ವಿವಾದಾತ್ಮಕ ಹೇಳಿಕೆ, ಸಂಸದ ನಳೀನ್ ಕುಮಾರ್ ವಿರುದ್ಧ ದೂರು

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ, 02 : ಪ್ರಚೋದನಕಾರಿ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಾಗಿದೆ. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದೆ.

ಇತ್ತೀಚಿಗೆ ಕೊಣಾಜೆಯಲ್ಲಿ ನಡೆದ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲು ಸಿದ್ದ' ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಭಾನವಾರ ನಡೆದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.[ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುತ್ತೇವೆ: ಸಂಸದ ಕಟೀಲ್]

Mangaluru: Congress files complaint against MP Nalin Kumar Kateel, says it will'douse the fire'

ಈ ಹೇಳಿಕೆ ವಿರುದ್ಧ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಚೋದನಕಾರಿ ಭಾಷಣ ಮಾಡಿ ಜಿಲ್ಲೆಯ ಜನರಲ್ಲಿ ಭಯವನ್ನುಂಟು ಮಾಡಿರುವ ಸಂಸದ ಕಟೀಲ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ತಿಳಿಸಲಾಗಿದೆ.[ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಯು.ಟಿ.ಖಾದರ್ ಖಂಡನೆ]

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಪಜೀರು ಗ್ರಾ.ಪಂ. ಅಧ್ಯಕ್ಷ ಸೀತಾರಾಮ ಶೆಟ್ಟಿ , ಕಾಂಗ್ರೆಸ್ ಮುಖಂಡ ಉಮ್ಮರ್ ಫಜೀರ್, ರಹ್ಮಾನ್ ಕೋಡಿಜಾಲ್, ರಮೇಶ್ ಶೆಟ್ಟಿ ಬೋಳಿಯಾರ್, ರವಿರಾಜ್ ಶೆಟ್ಟಿ, ಶೌಕತ್ ಅಲಿ, ನಝರ್ ಶಾ ಹಾಗೂ ಮಹಾಬಲ ಹೆಗಡೆ ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A day after MP Nalin Kumar Kateel made controversial remarks of 'setting DK on fire' if the culprits behind the murder of Karthik Raj were not arrested within 10 days, the Ullal block Congress on Monday January 2 filed a complaint against the MP in Konaje police station.
Please Wait while comments are loading...