ಪುತ್ತೂರು: ಲಂಚ ಕೇಳಿ ಸಿಕ್ಕಿಬಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಏಪ್ರಿಲ್ 18 : ಇತ್ತೀಚೆಗೆ ಲಂಚ ಸ್ವೀಕರಿಸುವ ವೇಳೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದ ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಲಾವಣ್ಯ ಅವರ ಜಾಮೀನು ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಲಾವಣ್ಯ ಅವರ ಪರವಾಗಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಇದನ್ನ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ. ಈ ಹಿನ್ನಲೆಯಲ್ಲಿ ಅವರ ನ್ಯಾಯಾಂಗ ಬಂಧನ ಮುಂದುವರೆದಿದೆ.[ಪುತ್ತೂರು: ಲಂಚ ಕೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿ]

Mangaluru Court rejects bail plea of Puttur development officer bribe case

ಘಟನೆ ವಿವರ: ಏಪ್ರಿಲ್ 12ರಂದು ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಲಾವಣ್ಯ ಅವರು ಎನ್ಓಸಿ ನೀಡಲು ಕೇಶವ ಸುವರ್ಣ ಎನ್ನುವರ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದರು.

ಪುತ್ತೂರಿನ ಅರಿಯಾಪು ಗ್ರಾಮದ ರೈತರೊಬ್ಬರು ತಮ್ಮ ಜಮೀನನ್ನು ವಾಣಿಜ್ಯ ಪರಿವರ್ತನೆ ಮಾಡುವಂತೆ ಪುತ್ತೂರು ನಗರ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ವೇಳೆ ಸಹಾಯಕ ನಿರ್ದೇಶಕಿ ಎಸ್. ಲಾವಣ್ಯ ಎಂಬುವವರು 10,000 ಹಣ ನೀಡುವಂತೆ ಕೇಳಿದ್ದರು. ಈ ಬಗ್ಗೆ ರೈತ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In a Red Hand operation ‘Anti Corruption Bureau’ officials arrested Puttur city development officer S Lavanya, when she was taking bribe from a farmer. S Lavanya had applied for bail and the mangaluru JMF court has rejected her plea.
Please Wait while comments are loading...