ಮಂಗಳೂರು ಜೈಲಿನಲ್ಲಿ ಮೊಬೈಲ್ ಜಾಮರ್ ಅಳವಡಿಕೆಗೆ ಕ್ರಮ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ, 27: ಮಂಗಳೂರು ಜೈಲಿನಲ್ಲಿ ಭದ್ರತೆ ತೀವ್ರಗೊಳಿಸಲು ಮಂಗಳೂರು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಜೈಲಿನಲ್ಲಿ ಮೊಬೈಲ್ ಜಾಮರ್ ಸಾಮರ್ಥ್ಯ ಮತ್ತು ಇನ್ನಷ್ಟು ಸಿಸಿಟಿವಿ ಕ್ಯಾಮರ ಅಳವಡಿಸಲು ಜಿಲ್ಲಾ ಕಾರಾಗೃಹ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾ ಕಾರಾಗೃಹ ಸಂದರ್ಶಕ ಮಂಡಳಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಎ.ಬಿ.ಇಬ್ರಾಹಿ, 'ಮಂಗಳೂರು ಜೈಲಿನಲ್ಲಿ ನಡೆಯುತ್ತಿರುವ ಕೈದಿಗಳ ಗುಂಪು ಘರ್ಷಣೆ, ಜೈಲಿನಲ್ಲಿ ನಿರ್ಮಾಣವಾಗಿರುವ ಅಹಿತಕರ ವಾತಾವರಣವನ್ನು ತಿಳಿಗೊಳಿಸಿ ಜೈಲಿನಲ್ಲಿ ಶಾಂತಿ ನೆಲೆಸುವಂತೆ ಮಾಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.[ಮಂಗಳೂರು ಜೈಲಿನಲ್ಲಿ ಹತ್ಯೆಯಾದವರು ಯಾರು?]

Mangaluru Deputy Commissioner A.B Ibrahim

ನಗರದ ಹೊರವಲಯದಲ್ಲಿ ನೂತನ ಕಾರಾಗೃಹ ನಿರ್ಮಾಣ ಸಂಬಂಧ ಜಾಗ ಕಾಯ್ದಿರಿಸಲಾಗಿದೆ. ಕಟ್ಟಡ ನಿರ್ಮಾಣ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಂತೆ ತಿಳಿಸಿದ ಅವರು, ಮಹಿಳಾ ಕೈದಿಗಳಿಗೆ ವೃತ್ತಿಪರ ತರಬೇತಿಯನ್ನು ಜೈಲಿನಲ್ಲಿ ನೀಡುವಂತೆ ಕ್ರಮ ಕೈಗೊಳ್ಳಲು ಜೈಲು ಅಧಿಕಾರಿಗಳಿಗೆ ತಿಳಿಸಿದರು.

ಸಭೆಗೂ ಮೊದಲು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಂ.ಜಿ. ಉಮಾ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪ ಎಸ್. ಡಿ ಜೈಲಿನ ಎಲ್ಲಾ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.[ಮಂಗಳೂರು ಜೈಲಿಗೆ ನೂತನ ಜೈಲರ್, ಅಧೀಕ್ಷಕರ ನೇಮಕ]

ನವೆಂಬರ್ ತಿಂಗಳಲ್ಲಿ ಮಂಗಳೂರು ಜೈಲಿನಲ್ಲಿ ಏನಾಗಿತ್ತು?

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನವೆಂಬರ್ ತಿಂಗಳಲ್ಲಿ ನಡೆದ ಇಬ್ಬರು ಕೈದಿಗಳ ಹತ್ಯೆ, ಹಾಗೂ ಆರು ಮಂದಿ ಗಾಯಗೊಂಡಿದ್ದರು. ತಲ್ವಾರ್ ನಿಂದಲೇ ಆ ಇಬ್ಬರು ಕೈದಿಗಳಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬಂಟ ಕುಖ್ಯಾತ ರೌಡಿ ಮಾಡೂರು ಯೂಸೂಬ್ (42) ಹಾಗೂ ವಿಚಾರಣಾಧೀನ ಕೈದಿ ಗಣೇಶ್ ಶೆಟ್ಟಿ ಅವರನ್ನು ಕೊಲೆಮಾಡಲಾಗಿತ್ತು. ಭೂಗತ ಲೋಕದಲ್ಲಿ ಸಕ್ರಿಯನಾಗಿ ತೊಡಗಿಕೊಂಡಿರುವ ಪಾತಕಿ ವಿಕ್ಕಿ ಶೆಟ್ಟಿಯ ಸಹಚರ ರೌಡಿ ಶೀಟರ್ ಆಕಾಶ್ ಭವನ್ ಶರಣ್ ತಂಡ ಇಬ್ಬರನ್ನು ಹತ್ಯೆ ಮಾಡಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mangaluru Deputy Commissioner A.B Ibrahim decided to apply the many CCTV and Mobile Jammer ability in Mangaluru jail on Tuesday, January 26th.
Please Wait while comments are loading...