ಕೋಟಿ ಚೆನ್ನಯರ ತಾಯಿ ವಿಗ್ರಹ ಸ್ವಚ್ಚತೆಗೆ ಅನುಮತಿ ಕೊಡದ ಅರಣ್ಯ ಇಲಾಖೆ

Posted By:
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 12 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯ ಕೋಟಿ ಚೆನ್ನಯರ ತಾಯಿ ದೇಯಿ ಬೈದೇದಿ ವಿಗ್ರಹವನ್ನು ಸ್ವಚ್ಛಗೊಳಿಸಲು ಅರಣ್ಯ ಇಲಾಖೆ ನಿರಾಕರಿಸಿದೆ.

ಕೋಟಿ-ಚೆನ್ನಯರ ತಾಯಿ ದೇಯಿ ಬೈದೆದಿಗೆ ಪುತ್ಥಳಿಗೆ ಅವಮಾನ ಮಾಡಿದ ಹಿನ್ನಲೆಯಲ್ಲಿ ದೇಯಿ ಬೈದೆದಿ ಪುತ್ಥಳಿ ಸ್ವಚ್ಚ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರು ಹಾಗೂ ಹಿಂದೂ ಸಂಘಟನೆಗಳು ಮುಂದಾದಾಗ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದು, ಈ ಹಿನ್ನಲೆಯಲ್ಲಿ ಕಾರ್ಯಕರ್ತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

Mangaluru Forest Department denial of permission for cleaning of Deyi Baidethi idol

ಅರಣ್ಯ ಇಲಾಖೆಯು ನಿರ್ಮಿಸಿರುವ ಔಷಧೀಯ ವನದಲ್ಲಿ ನಿರ್ಮಿಸಿರುವ ದೇಯಿ ಬೈದೆದಿಯ ಪುತ್ಥಳಿಯ ಪಕ್ಕದಲ್ಲಿ ಕೂತು ಈಶ್ವರಮಂಗಲದ ನಿವಾಸಿ ಹನೀಫ್ ಎನ್ನುವ ಯುವಕ ಆಕೆಯ ಎದೆಯನ್ನು ಮುಟ್ಟುವ ಅನಾಗರಿಕ ವರ್ತನೆಯನ್ನು ತೋರಿ ಹಾಗೂ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ.

ಕೋಟಿ ಚೆನ್ನಯರ ತಾಯಿ ವಿಗ್ರಹಕ್ಕೆ ಅಪಮಾನ ಮಾಡಿದ ಯುವಕ ಬಂಧನ

ಈ ಹಿನ್ನಲೆಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಬಿಲ್ಲವ ಸಂಘಟನೆಗಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿತ್ತು.

ಈ ಹಿನ್ನಲೆಯಲ್ಲಿ ಇಂದು ಸಾರ್ವಜನಿಕರ ಹಾಗೂ ಹಿಂದೂ ಸಂಘಟನೆಗಳಿಂದ ದೇಯಿ ಬೈದೆದಿ ಪಾರ್ಕ್ ನಲ್ಲಿರುವ ಪುತ್ಥಳಿಗೆ ಹಾಲು ಮತ್ತು ಶಿಯಾಳ ಅಭಿಷೇಕ ನಡೆಸಲು ಮುಂದಾರು. ಆದರೆ ಇದಕ್ಕೆ ಅರಣ್ಯ ಇಲಾಖೆಯಿಂದ ಅನುಮತಿ ನಿರಾಕರಿಸಿದೆ.

ಸುಮಾರು 100ಕ್ಕೂ ಹೆಚ್ಚು ಸಾರ್ವಜನಿಕರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನಲೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Offensive picture of himself with deity Deyi Baidethi, residents of Padumale and Hindu organization members move forward to cleanse the premises for which the Forest department denied permission. Angry people protest against the officials for denial of permission for cleansing the premises here on Sep 12.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ