ಮಂಗಳೂರು: ತಲಪಾಡಿ ಟೋಲ್ ಗೇಟ್ ವಿರುದ್ಧ ಮುಂದುವರಿದ ಪ್ರತಿಭಟನೆ

Subscribe to Oneindia Kannada

ಮಂಗಳೂರು, ಫೆಬ್ರವರಿ 9: ಕಾಮಗಾರಿ ಪೂರ್ತಿಗೊಳಿಸದೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿಯಲ್ಲಿ ಟೋಲ್ ಸಂಗ್ರಹ ನಡೆಸುವುದನ್ನು ವಿರೋಧಿಸಿ ಎರಡನೇ ದಿನವೂ ಪ್ರತಿಭಟನೆ ನಡೆಯಿತು.

Mangaluru: People staged protest for second day against Talapady toll gate

ಗುರುವಾರ ಯು.ಡಿ.ವೈ.ಎಫ್ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಟೋಲ್ ಪ್ಲಾಝಾ ಮುಂದೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನೂರಾರು ಯು.ಡಿ.ವೈ.ಎಫ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ತಲಪಾಡಿ ಪೆಟ್ರೋಲ್ ಬಂಕ್ ಬಳಿಯಿಂದ ಪ್ರಾರಂಭಗೊಂಡ ಪ್ರತಿಭಟನಾ ಮೆರವಣಿಗೆಯನ್ನು ಟೋಲ್ ಪ್ಲಾಝಾದ ಮುಂದೆ ಪೊಲೀಸರು ತಡೆದರು.[ಟೋಲ್ ಎಫೆಕ್ಟ್, ಮಂಗ್ಳೂರು ಖಾಸಗಿ ಬಸ್ ಪ್ರಯಾಣ ದರ ಏರಿಕೆ]

Mangaluru: People staged protest for second day against Talapady toll gate

ನಾಸಿರ್ ಮೊಗ್ರಾಲ್ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನೆಗೆ ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಝಾಕ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಟೋಲ್ ಸಂಗ್ರಹ ಮಾಡಬಾರದು. ಸರ್ವೀಸ್ ರಸ್ತೆ, ಮೇಲ್ಸೇತುವೆಗಳು ಪೂರ್ಣಗೊಳಿಸಿದೆ ಸಂಗ್ರಹ ಮಾಡಕೂಡದು ಎಂದು ಹೇಳಿದರು.[ಮಂಗಳೂರು: ತಲಪಾಡಿ ಟೋಲ್ ಗೇಟ್ ವಿರುದ್ಧ ರೊಚ್ಚಿಗೆದ್ದ ಜನ]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Protest continued for second in Talapady area after toll collection began at the toll plaza here on Wednesday in National Highway 66, Mangaluru.
Please Wait while comments are loading...