ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

7 ಸರಗಳ್ಳತನ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು

|
Google Oneindia Kannada News

ಮಂಗಳೂರು, ಡಿಸೆಂಬರ್ 11 : ಮಂಗಳೂರು ನಗರ ಕೇಂದ್ರ ರೌಡಿ ನಿಗ್ರಹ ದಳದ ಪೊಲೀಸರು ಇಬ್ಬರು ಸರಗಳ್ಳರನ್ನು ಬಂಧಿಸಿದ್ದಾರೆ.

ಶಿಳ್ಳೆ ತಂದಿಟ್ಟಿತು ಆಪತ್ತು: ಅಮೆರಿಕಾ ಬದಲು ಜೈಲು ಪಾಲಾದ ಎನ್‌ಆರ್‌ಐಗಳುಶಿಳ್ಳೆ ತಂದಿಟ್ಟಿತು ಆಪತ್ತು: ಅಮೆರಿಕಾ ಬದಲು ಜೈಲು ಪಾಲಾದ ಎನ್‌ಆರ್‌ಐಗಳು

ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿದ ಮಂಗಳೂರು ನಗರದ ಕೇಂದ್ರ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ 07 ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಉದ್ಯಮಿಗಳನ್ನು ಮಂಚಕ್ಕೆ ಕರೆದು ಹನಿಟ್ರ್ಯಾಪ್ ಮಾಡುತ್ತಿದ್ದ ಯುವತಿ ಬಲೆಗೆಉದ್ಯಮಿಗಳನ್ನು ಮಂಚಕ್ಕೆ ಕರೆದು ಹನಿಟ್ರ್ಯಾಪ್ ಮಾಡುತ್ತಿದ್ದ ಯುವತಿ ಬಲೆಗೆ

ಬಂಧಿತ ಆರೋಪಿಗಳನ್ನು ಮಂಗಳೂರು ದೇರಳಕಟ್ಟೆ ನಿವಾಸಿ ಹರೀಶ್ ಎಸ್ ನಾಥ್(45), ಕಂಕನಾಡಿ ನಿವಾಸಿ ರಾಜೇಶ್(45) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 3,64 ಲಕ್ಷ ರೂಪಾಯಿ ಮೌಲ್ಯದ ಒಟ್ಟು 126.960 ಗ್ರಾಂ ಚಿನ್ನದ ಆಭರಣಗಳು ಮತ್ತು ಆಕ್ಟಿವಾ ಸ್ಕೂಟರ್ ಸಮೇತ ಒಟ್ಟು 3,74 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನುಪೊಲೀಸರು ವಶಪಡಿಸಿಕೊಂಡಿದ್ದಾರೆ.

Mangaluru Police arrested Chain snatchers

ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಆಕ್ಟೀವಾ ಸ್ಕೂಟರ್ ನಲ್ಲಿ ಬರುವ ಇಬ್ಬರು ಸುಲಿಗೆ ಮಾಡಿಕೊಂಡು ಹೋದ ಬಗ್ಗೆ ಉರ್ವ ಪೊಲೀಸ್ ಠಾಣೆ ಯಲ್ಲಿ 1 ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2. ಪ್ರಕರಣ, ಕದ್ರಿ ಪೊಲೀಸ್ ಠಾಣೆಯಲ್ಲಿ 1ಪ್ರಕರಣ, ಕಾವೂರು ಠಾಣೆಯಲ್ಲಿ 1 ಪ್ರಕರಣ ಮತ್ತು ದಕ್ಷಿಣ ಠಾಣೆ ಯಲ್ಲಿ 2 ಸುಲಿಗೆ ಯತ್ನ ಪ್ರಕರಣಗಳು ದಾಖಲಾಗಿತ್ತು.

English summary
Mangaluru police nab two persons who allegedly involved in Chain snatchers on December10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X