ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸಿಬಿ ಬಲೆಗೆ ಬಿದ್ದಿದ್ದ ಗಾಯತ್ರಿ ನಾಯಕ್ ಜಾಮೀನು ಅರ್ಜಿ ವಜಾ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಜನವರಿ. 8: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿದ್ದ ವಿಶೇಷ ಭೂಸ್ವಾಧೀನಾಧಿಕಾರಿ ಗಾಯತ್ರಿ ಎನ್. ನಾಯಕ್ ಹಾಗೂ ಕಚೇರಿ ಸಹಾಯಕ ತುಕ್ರಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಶನಿವಾರ ಮಂಗಳೂರು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಭೂಸ್ವಾಧೀನ ಪರಿಹಾರ ಚೆಕ್ ವಿತರಿಸಲು ಯೋಗೀಶ್ ಎಂಬುವರಿಂದ 25,000 ರೂ.ಲಂಚ ಪಡೆಯುತ್ತಿದ್ದಾಗ ಜನವರಿ 4ರಂದು ಎಸಿಬಿ ಬಲೆಗೆ ಬಿದ್ದಿದ್ದರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೊಪ್ಪಿಸಿಸಲಾಗಿತ್ತು.[ಎಸಿಬಿ ಬಲೆಗೆ ಬಿದ್ದಿದ್ದ ಗಾಯತ್ರಿ ನಾಯಕ್ ಆಸ್ಪತ್ರೆಗೆ ದಾಖಲು]

Mangaluru Sessions Court rejects bail plea of Gayatri Nayak

ಇಬ್ಬರು ಆರೋಪಿಗಳನ್ನು ಉಪ ಕಾರಾಗೃಹಕ್ಕೆ ಕರೆದುಕೊಂಡು ಬಂದಾಗ ಗಾಯತ್ರಿ ನಾಯಕ್ ಅನಾರೋಗ್ಯದ ಕಾರಣ ಒಡ್ಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.[ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಭೂಸ್ವಾಧೀನಾಧಿಕಾರಿ ಎಸಿಬಿ ಬಲೆಗೆ]

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಆಸ್ಪತ್ರೆಯಿಂದಲೇ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

English summary
The Mangaluru Sessions Court on Saturday, rejected the bail plea of national highways officer Gayathri Nayak accused in bribe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X