ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'15 ಕೋಟಿ ರೂ.ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ'

|
Google Oneindia Kannada News

ಮಂಗಳೂರು, ಅಕ್ಟೋಬರ್ 07 : ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ ಯೋಜನೆ ಅಡಿ ನೀಡಿರುವ ಹಣವನ್ನು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಕಸಾಯಿಖಾನೆ ರಚಿಸಲು ಮುಂದಾಗಿರುವುದು ದುರಂತ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಅವರು ಮಂಗಳೂರು ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ಮಾರ್ಟ್ ಸಿಟಿ ಯೋಜನೆ ಸಂಪೂರ್ಣ ಗೊಂದಲಮಯವಾಗಿದ್ದು ಯೋಜನೆಯ ಕೋಟ್ಯಂತರ ರೂಪಾಯಿ ದುರುಪಯೋಗವಾಗುತ್ತಿದೆ.

ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವ್ಯಂಗ್ಯವಾಡಿದ ರಮಾನಾಥ್ ರೈಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ವ್ಯಂಗ್ಯವಾಡಿದ ರಮಾನಾಥ್ ರೈ

ರಾಜ್ಯ ಸರ್ಕಾರ ತಕ್ಷಣ ಸ್ಮಾರ್ಟ್ ಸಿಟಿ ಯೋಜನೆಗೆ ಪೂರ್ಣ ಪ್ರಮಾಣದ ಎಂಡಿ ಹಾಗೂ ಸಲಹಾ ಸಮಿತಿ ರಚಿಸಬೇಕು. ದೇಶದ ನಗರ ಹಾಗು ಪಟ್ಟಣಗಳ ಸಮಗ್ರ ಅಭಿವೃದ್ದಿ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಳಿಸಿದೆ.

Nalin Kumar Kateel

ಆದರೆ ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಸಮಗ್ರ ಅಭಿವೃದ್ಧಿಯ ಉದ್ದೇಶವನ್ನೇ ಮರೆತು ಕಸಾಯಿಖಾನೆ ಅಭಿವೃದ್ಧಿಗೆ ಮುಂದಾಗಿದೆ ಎಂದು ನಳಿನ್ ಕುಮಾರ್ ಕಿಡಿಕಾರಿದು.

ಸಚಿವ ಖಾದರ್ ಮನೆ ಮುಂದೆಯೇ ಹದಗೆಟ್ಟ ರಸ್ತೆ! ಕಣ್ಮುಚ್ಚಿರುವ ಪಾಲಿಕೆಸಚಿವ ಖಾದರ್ ಮನೆ ಮುಂದೆಯೇ ಹದಗೆಟ್ಟ ರಸ್ತೆ! ಕಣ್ಮುಚ್ಚಿರುವ ಪಾಲಿಕೆ

ಸ್ಮಾರ್ಟ್ ಸಿಟಿಯೋಜನೆಯಡಿ ನಿಗದಿತ ದರಕ್ಕಿಂತ ಹೆಚ್ಚಿನ ದರ ನಮೂದಿಸಿ ಕಾಮಗಾರಿ ಗುತ್ತಿಗೆ ನೀಡಲಾಗುತ್ತಿದೆ ಎಂದು ದೂರಿದ ಅವರು ಸ್ಮಾರ್ಟ್ ಸಿಟಿ ಯೋಜನೆಯಡಿ ಯಾವುದೇ ಕಾಮಗಾರಿ ಪೂರ್ಣವಾಗಿಲ್ಲ. ಹಣ ದುರುಪಯೋಗವಾಗುವ ಸಾಧ್ಯತೆ ಇದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ 'ನಳಿನ್ ಹಠಾವೋ' ಚಳವಳಿಗೆ ಬಿಜೆಪಿ ನಾಯಕರ ಕುಮ್ಮಕ್ಕು?ಸಾಮಾಜಿಕ ಜಾಲತಾಣದಲ್ಲಿ 'ನಳಿನ್ ಹಠಾವೋ' ಚಳವಳಿಗೆ ಬಿಜೆಪಿ ನಾಯಕರ ಕುಮ್ಮಕ್ಕು?

ಅಕ್ರಮಗಳು ನಡೆಯುವ ಆರೋಪ ಹೊಂದಿರುವ ಮಂಗಳೂರಿನ ಕಸಾಯಿಖಾನೆಗೆ ಸ್ಮಾರ್ಟ್ ಸಿಟಿಯ 15 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಹೇಳಿದ್ದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ರವರ ಹೇಳಿಕೆ ವಿವಾದ ಸೃಷ್ಟಿಸಿತ್ತು.

ಮಂಗಳೂರಿನ ಕುದ್ರೋಳಿಯಲ್ಲಿರುವ ಕಸಾಯಿಖಾನೆ ಅಕ್ರಮವಾಗಿ ನಡೆಯುತ್ತಿರುವ ಕಸಾಯಿಖಾನೆ ಎಂಬ ಆರೋಪವನ್ನು ಹೊಂದಿದ್ದು, ಜಿಲ್ಲೆಯಲ್ಲಿ ಕದ್ದ ದನಗಳನ್ನೆಲ್ಲಾ ಕುದ್ರೋಳಿ ಕಸಾಯಿಖಾನೆಯಲ್ಲೇ ವಧೆ ಮಾಡುವ ಆರೋಪವಿದೆ.

ರಮಾನಾಥ್ ರೈ ಎಲ್ಲಾ ವಿಚಾರ ಕರಗತ ಮಾಡಿಕೊಂಡಿರುವ ಸರ್ವಜ್ಞ: ನಳಿನ್ ವ್ಯಂಗ್ಯರಮಾನಾಥ್ ರೈ ಎಲ್ಲಾ ವಿಚಾರ ಕರಗತ ಮಾಡಿಕೊಂಡಿರುವ ಸರ್ವಜ್ಞ: ನಳಿನ್ ವ್ಯಂಗ್ಯ

ಈ ಹಿನ್ನೆಲೆಯಲ್ಲಿ ಅದೇ ಕಸಾಯಿಖಾನೆಯ ಅಭಿವೃದ್ಧಿ ಸಚಿವ ಯುಟಿ ಖಾದರ್ 15 ಕೋಟಿ ರೂಪಾಯಿ ಅನುದಾನ ನೀಡುವ ಹೇಳಿಕೆ ವಿವಾದ ಸೃಷ್ಟಿಸಿದೆ.

English summary
Speaking to media persons in Mangaluru MP Nalin Kumar Kateel slams district incharge minister U T Khadar. He said The Smart City project being implemented in the city has become a hub of confusions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X