ಜಾತಿ ನಿಂದನೆ: ಕೊಣಾಜೆ ಪಿಎಸ್ ಐ ಶ್ರೀಕಲಾ, ಪೇದೆ ಅಮಾನತು

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಏಪ್ರಿಲ್ 12 : ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯ ಪಿಎಸ್ ಐ ಶ್ರೀಕಲಾ ಮತ್ತು ಪೊಲೀಸ್ ಕಾನ್‌ಸ್ಟೇಬಲ್ ರಾಜೇಶ್‌ರನ್ನು ನಗರ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್ ಅಮಾನತುಗೊಳಿಸಿದ್ದಾರೆ.

ಮುಡಿಪು ಕಾಲೇಜು ಸಮೀಪದ ತರಕಾರಿ ಅಂಗಡಿಯೊಂದರಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪದಡಿ ರುಕ್ಮಯ್ಯ ಎಂಬುವರನ್ನು ಬಂಧಿಸಲಾಗಿತ್ತು. ಬಳಿಕ ಜೈಲಿನಿಂದ ಹೊರ ಬಂದ ರುಕ್ಮಯ್ಯ, ತನಗೆ ಠಾಣೆಯಲ್ಲಿ ಪೊಲೀಸರು ಹಲ್ಲೆ ಮಾಡಿ ಜಾತಿನಿಂದನೆ ಮಾಡಿದ್ದಾರೆ ಎಂದು ಎಸಿಪಿಗೆ ದೂರು ನೀಡಿದ್ದರು.

Mangaluru: Two police officers of konaje police station suspended for misuse of power

ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಅಧಿಕಾರಿ ಪ್ರಾಥಮಿಕ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ಪಿಎಸ್ ಐ ಶ್ರೀಕಲಾ ಹಾಗೂ ಕಾನ್‌ ಸ್ಟೇಬಲ್ ರಾಜೇಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The Konaje sub-inspector Shreekala and constable Rajesh were suspended for allegedly harassing and insulting a Dalit vendor on the basis of caste on Tuesday.
Please Wait while comments are loading...