ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಬರಿಮಲೆ ತೀರ್ಪಿನ ವಿರುದ್ಧ ಅ.9 ರಂದು ಮಂಗಳೂರಲ್ಲಿ ಬೃಹತ್ ಪ್ರತಿಭಟನೆ

|
Google Oneindia Kannada News

ಮಂಗಳೂರು, ಅಕ್ಟೋಬರ್ 07 : ಶಬರಿಮಲೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಆಕ್ರೋಶ ಭುಗಿಲೇಳುತ್ತಿದೆ. ಕೇರಳದಲ್ಲಿ ಈಗಾಗಲೇ ಬೃಹತ್ ಪ್ರತಿಭಟನೆಗಳು ಆರಂಭವಾಗಿವೆ. ಕರ್ನಾಟಕದಲ್ಲೂ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಆಕ್ರೋಶ ಬಲ ಪಡೆಯುತ್ತಿದೆ.

ಈ ನಡುವೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಬೃಹತ್ ಹೋರಾಟ ನಡೆಸಲು ಮಂಗಳೂರಿನ ಅಯ್ಯಪ್ಪ ಸೇವಾ ಸಮಿತಿ ನಿರ್ಧರಿಸಿದೆ.

ಶಬರಿಮಲೆಗೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ: ವೈರಲ್ ಆದ ಪ್ರಕಟಣೆಶಬರಿಮಲೆಗೆ ಪಂದಳ ರಾಜಮನೆತನದವರು ಕಾಲಿಡುವುದಿಲ್ಲ: ವೈರಲ್ ಆದ ಪ್ರಕಟಣೆ

ಹೋರಾಟದ ಪೂರ್ವಭಾವಿ ಸಭೆ ಶನಿವಾರ ಸಂಜೆ ನಗರದ ಸಂಘನಿಕೇತನದಲ್ಲಿ ನಡೆಸಲಾಯಿತು. ಮೊದಲ ಹಂತವಾಗಿ ಅಕ್ಟೋಬರ್ 9 ರಂದು ಸಂಜೆ ಕದ್ರಿ ಮೈದಾನದಲ್ಲಿ ಮಹಿಳೆಯರು ಸೇರಿದಂತೆ ಸಹಸ್ರಾರು ಜನ ಸೇರಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

Massive protest in Mangalore on october 8

ಸಭೆಯ ಬಳಿಕ ಭಜನೆಯ ಮೂಲಕ ಶ್ರೀ ಕ್ಷೇತ್ರ ಕದ್ರಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಪಾಲ್ಗೊಂಡ ವಿವಿಧೆಡೆಯ ಅಯ್ಯಪ್ಪಸ್ವಾಮಿ ಭಕ್ತರು, ಸಂಘಟನೆಗಳ ಪ್ರಮುಖರು ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯ ಪುಣ್ಯ ಕ್ಷೇತ್ರಗಳಲ್ಲಿ ಪೂಜೆ ಸಲ್ಲಿಸಿ ಆ ಬಳಿಕ ಕದ್ರಿ ಮೈದಾನದಲ್ಲಿ ಸೇರುವಂತೆ ಸೂಚನೆ ನೀಡಲಾಗಿದೆ.

ಶಬರಿಮಲೆ ದೇವಸ್ಥಾನದ ವಿವಾದ: ಕಾನೂನು ಹೋರಾಟದ ಟೈಮ್‌ಲೈನ್ಶಬರಿಮಲೆ ದೇವಸ್ಥಾನದ ವಿವಾದ: ಕಾನೂನು ಹೋರಾಟದ ಟೈಮ್‌ಲೈನ್

ಸಭೆಯನ್ನುದ್ದೇಶಿಸಿ ಮಾತನಾಡಿದ ಆರ್ ಎಸ್ಎಸ್ ನ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್, ಇಡೀ ದೇಶವನ್ನು ಒಗ್ಗೂಡಿಸಿದ ಶಕ್ತಿಯ ಕ್ಷೇತ್ರವೆಂದರೆ ಅದು ಶಬರಿಮಲೆ.

ಶಬರಿಮಲೆ ಮಹಿಳೆಯರಿಗೆ ಪ್ರವೇಶ: ಇದು ವಿವಾದದ ಅಂತ್ಯವಲ್ಲ, ಆರಂಭ!ಶಬರಿಮಲೆ ಮಹಿಳೆಯರಿಗೆ ಪ್ರವೇಶ: ಇದು ವಿವಾದದ ಅಂತ್ಯವಲ್ಲ, ಆರಂಭ!

ಅತ್ಯಂತ ಶ್ರದ್ಧಾ ಭಕ್ತಿಯಿಂದ ಕೋಟ್ಯಂತರ ಮಂದಿ ಈ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಆದರೆ ಪರಂಪರೆಯಿಂದ ಬಂದ ಜನತೆಯ ನಂಬಿಕೆಗೆ ಧಕ್ಕೆ ತರುವ ಕೆಲಸ ಸುಪ್ರೀಂ ಕೋರ್ಟ್ ತೀರ್ಪಿನ ಮೂಲಕ ಆಗಿದೆ ಎಂದು ಅಭಿಪ್ರಾಯಪಟ್ಟರು.

Massive protest in Mangalore on october 8

ಕೇರಳ ಸರಕಾರ ತೀರ್ಪಿನ ಮರು ಪರಿಶೀಲನೆಗೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲೇಬೇಕು. ಭಕ್ತರ ಧಾರ್ಮಿಕ ಭಾವನೆಗೆ ಮೊದಲ ಅವಕಾಶ ನೀಡಬೇಕು. ಅಲ್ಲಿವರೆಗೆ ಹೋರಾಟ ನಿಲ್ಲಬಾರದು ಎಂದು ಕರೆ ನೀಡಿದರು.

ಶಬರಿಮಲೆ ತೀರ್ಪು: ಕೇರಳ ಸರ್ಕಾರದಿಂದ ಮರುಪರಿಶೀಲನಾ ಅರ್ಜಿ ಇಲ್ಲ!ಶಬರಿಮಲೆ ತೀರ್ಪು: ಕೇರಳ ಸರ್ಕಾರದಿಂದ ಮರುಪರಿಶೀಲನಾ ಅರ್ಜಿ ಇಲ್ಲ!

ಹಿಂದು ಸಮಾಜ ಮಹಿಳಾ ವಿರೋಧಿಯಲ್ಲ, ಶಬರಿಮಲೆಗೆ ಮಹಿಳೆಯರಿಗೆ ನಿಷೇಧವನ್ನೂ ಹೇರಿಲ್ಲ. 10 ನೇ ವಯಸ್ಸಿನೊಳಗಿನ ಮತ್ತು 50 ವರ್ಷ ಮೇಲ್ಪಟ್ಟ ಮಹಿಳೆಯರು ಶಬರಿ ಮಲೆಗೆ ಬರಲು ಹಿಂದಿನಿಂದಲೂ ಅವಕಾಶವಿದೆ. ಆದರೆ ಶಬರಿಮಲೆ ಏನೆಂದೇ ಗೊತ್ತಿರದ ಮಂದಿ ಕೋರ್ಟ್ ಮೆಟ್ಟಿಲೇರುವ ಮೂಲಕ ಪರಂಪರೆಗೆ ಪೆಟ್ಟು ನೀಡುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

English summary
Various hindu organisations has decided stage protest against SC verdict on Shabarimala on October 09 in Mangaluru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X