ಮೂಡಬಿದಿರೆಯಲ್ಲಿ 'ಮೀಡಿಯಾ ಬಜ್' ರಾಷ್ಟ್ರೀಯ ವಿಚಾರ ಸಂಕಿರಣ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮೂಡುಬಿದಿರೆ,ಮಾರ್ಚ್,10: ಆಳ್ವಾಸ್ ಕಾಲೇಜಿನ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗವು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ 'ಮೀಡಿಯಾ ಬಝ್' ರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಂಡಿದ್ದು, ಈ ಮಾಧ್ಯಮ ಉತ್ಸವ ಮಾರ್ಚ್ 11 ಮತ್ತು 12ರಂದು ನಡೆಯಲಿದೆ.

'ಮೀಡಿಯಾ ಬಝ್ ' ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ಅಧ್ಯಕ್ಷೆ ಡಾ. ವಹೀದಾ ಸುಲ್ತಾನಾ ಪಾಲ್ಗೊಳ್ಳಲಿದ್ದಾರೆ ಎಂದು ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಡಾ. ಮೌಲ್ಯ ಜೀವನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.[ಡಾ.ಮೋಹನ್ ಆಳ್ವ ಸಂದರ್ಶನ]

'Media Buzz' National level seminar at Alva's college, Moodabidri

'ಮೀಡಿಯಾ ಬಝ್' ರಾಷ್ಟ್ರೀಯ ವಿಚಾರ ಸಂಕಿರಣದ ಕಾರ್ಯಕ್ರಮಗಳ ವಿವರ:

* ತನಿಖಾ ಪತ್ರಿಕೋದ್ಯಮ ಆಯಾಮಗಳು ಮತ್ತು ಪ್ರಾಯೋಗಿಕ ಅನ್ವಯಗಳು" ಎಂಬ ವಿಷಯದ ವಿಚಾರ ಸಂಕಿರಣವನ್ನು ಹಿರಿಯ ಪತ್ರಕರ್ತ ಅನಂತ ಚಿನಿವಾರ್ ಉದ್ಘಾಟಿಸಲಿದ್ದಾರೆ.

* ಈ ವಿಷಯದ ಕುರಿತು ಪತ್ರಕರ್ತ ಜಿತೇಂದ್ರ ಕುಂದೇಶ್ವರ ಮಾತನಾಡಲಿದ್ದಾರೆ. ಈ ವಿಚಾರ ಸಂಕಿರಣಕ್ಕೆ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಹಾಗೂ ಉಡುಪಿ ಪೊಲೀಸ್ ವರಿಷ್ಟಾಧಿಕಾರಿ ಕೆ ಅಣ್ಣಾಮಲೈ ಭಾಗವಹಿಸಲಿದ್ದಾರೆ.[ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ದೃಶ್ಯಕಲೆಯಲ್ಲಿ ಪದವಿ, ಉದ್ಯೋಗ]

ಸಮಾರೋಪ ಸಮಾರಂಭ:

ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು , ಮುಖ್ಯ ಅತಿಥಿಗಳಾಗಿ ಪತ್ರಕರ್ತ ರೊನಾಲ್ಡ್ ಅನಿಲ್ ಫೆರ್ನಾಂಡಿಸ್, ಮೂಡುಬಿದಿರೆ ಪ್ರೆಸ್ ಕ್ಲಬ್‌ ಅಧ್ಯಕ್ಷ ಎಂ. ಗಣೇಶ್ ಕಾಮತ್ ಭಾಗವಹಿಸಲಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
'Media Buzz' National level seminar at Alvas college at Moodabidri on March 11 and 12. Dr. Mohan Alwa, The president of Alva's Shikshana Prathishtana will preside in this event. Investigation Journalism seminar will be inaugurated by Anantha Chinivar. Journalist Jitendra Kundeshwar, Vijayalakshmi Shibarur, Udupi SP Annamalai and others are present at the event.
Please Wait while comments are loading...