ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯುವಕನ ಬಂಧನ

|
Google Oneindia Kannada News

ಮಂಗಳೂರು, ಆಗಸ್ಟ್ 30: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊರ್ವ ನಿರಂತರ ಆರು ತಿಂಗಳ ಕಾಲ ಅತ್ಯಾಚಾರ ಎಸಗಿದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಕೋಲಾರ : ಸರ್ಕಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಕೋಲಾರ : ಸರ್ಕಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಎಂಬಲ್ಲಿನ ಫಾಸ್ಟ್ ಫುಡ್ ಅಂಗಡಿಯೊಂದರಲ್ಲಿ ಕೆಲಸ ಮಾಡುತಿದ್ದ ಕಮ್ಮ ಬಹದ್ದೂರ್ ಸಿಂಗ್ ಎಂಬುವನನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ .

Minor girl raped for about 6 months in Mangaluru - Rapist arrested

ಮಂಗಳೂರು ಹೊರವಲಯದ ದೇರಳಕಟ್ಟೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನೇಪಾಳ ಮೂಲದ ಮೂರು ಕುಟುಂಬಗಳು ವಾಸವಾಗಿದ್ದವು. ಇದೇ ಮನೆಯಲ್ಲಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ತನ್ನ ತಂದೆ ತಾಯಿ ಅವರೊಂದಿಗೆ ವಾಸವಾಗಿದ್ದಳು .

ಮಂಗಳೂರು : ಕೊಲೆಗೆ ಸಂಚು ರೂಪಿಸಿದ್ದ ಐವರ ಬಂಧನಮಂಗಳೂರು : ಕೊಲೆಗೆ ಸಂಚು ರೂಪಿಸಿದ್ದ ಐವರ ಬಂಧನ

ಬಾಲಕಿಯ ಪಕ್ಕದ ಮನೆಯಲ್ಲಿಆರೋಪಿ ಕಮ್ಮ ಬಹದ್ದೂರ್ ಸಿಂಗ್ ತನ್ನ ಸಹೋದರನೊಂದಿಗೆ ವಾಸವಾಗಿದ್ದ. ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ .

ಈ ಹಿನ್ನೆಲೆಯಲ್ಲಿ ಬಾಲಕಿ ಗರ್ಭವತಿಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಆರೋಪಿ ತಲೆಮರೆಸಿಕೊಂಡಿದ್ದ. ಬಾಲಕಿಯ ಪೋಷಕರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಕೊಣಾಜೆ ಠಾಣೆ ಪೊಲೀಸರು ಆರೋಪಿ ಕಮ್ಮ ಬಹದ್ದೂರ್ ಸಿಂಗ್ ನನ್ನು ಬಂಧಿಸಿದ್ದಾರೆ.

English summary
In a shocking incident a minor girl was constantly raped for about 6 Months. The Konaje police have succedded in arresting the rapist. The accussed is identified as Bahudur Singh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X