ಮಂಗಳೂರು ವಿವಿ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ವಿದ್ಯಾರ್ಥಿ ಬಂಧನ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 15 : ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್‌ನ ವಿಜ್ಞಾನ ವಿಭಾಗದ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆಗಸ್ಟ್ 24ರಂದು ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿತ್ತು.

ಬಂಧಿತ ಆರೋಪಿಯನ್ನು ಸುಳ್ಯ ತಾಲೂಕಿನ ಎಡಮಂಗಲ ಮುರೋಳಿ ನಿವಾಸಿ ಎಂ.ಸಂತೋಷ್ (22) ಎಂದು ಗುರುತಿಸಲಾಗಿದೆ. ಸಂತೋಷ್ ಸಾಗರ ಪ್ರಾಣಿವಿಜ್ಞಾನ ವಿಭಾಗದ ದ್ವಿತೀಯ ಎಂ.ಎಸ್‌ಸಿ ವಿದ್ಯಾರ್ಥಿ. ತಾನೇ ಈ ಕೃತ್ಯ ಎಸಗಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ.[ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ]

mangaluru student

ಬುಧವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ,ಚಂದ್ರಶೇಖರ್ ಅವರು ಈ ಕುರಿತು ಮಾಹಿತಿ ನೀಡಿದರು. 'ಆಗಸ್ಟ್‌ 24ರಂದು ನಸುಕಿನಲ್ಲಿ ಸಂತೋಷ್ ಮುಸುಕು ಹಾಕಿಕೊಂಡು ಬಂದು ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್‌ ಇಟ್ಟು ಹೋಗಿದ್ದ' ಎಂದು ಆಯುಕ್ತರು ಮಾಹಿತಿ ನೀಡಿದರು.[ಶೌಚಾಲಯಕ್ಕಾಗಿ ಉಪವಾಸ ಕುಳಿತ ವಿದ್ಯಾರ್ಥಿನಿ ಮಲ್ಲಮ್ಮ!]

ಸೆಪ್ಟೆಂಬರ್ 1ರಂದು ವಿಶ್ವವಿದ್ಯಾಲಯದ ಕುಲಸಚಿವರು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು 82 ಶಂಕಿತರನ್ನು ವಿಚಾರಣೆ ನಡೆಸಿದ್ದರು. ಹಾಸ್ಟೆಲ್‌ನಲ್ಲಿ ನೆಲೆಸಿದ್ದ ಈತ ಕೃತ್ಯ ಬಯಲಿಗೆ ಬರುತ್ತಿದ್ದಂತೆ ಬೇರೆ ಕಡೆ ತೆರಳಿದ್ದ. ಒಂದು ವಾರದ ಬಳಿಕ ಪುನಃ ವಾಪಸ್ ಬಂದಿದ್ದ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Mangaluru city police commissioner Chandra Shekar on September 14 said that, the person who kept the mobile camera at the University ladies toilet stands arrested. Santhosh (22) is the person arrested.
Please Wait while comments are loading...