ಮುಂದೆ ಬಿನ್ ಲಾಡೆನ್ ಜಯಂತಿಯೂ ಮಾಡಬಹುದು: ಮುತಾಲಿಕ್

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಅಕ್ಟೋಬರ್ 19: ದಲಿತರ ಮತ್ತು ದಮನಿತರ ಹಕ್ಕುಗಳಿಗಾಗಿ ನಡೆದ 'ಉಡುಪಿ ಚಲೋ' ಚಳವಳಿ 'ಆಹಾರ ನಮ್ಮ ಆಯ್ಕೆ, ಭೂಮಿ ನಮ್ಮ ಹಕ್ಕು' ಎಂಬ ಘೋಷಣೆಯಡಿ ನಡೆಯಿತು. ಆದರೆ ಕೆಲ ವಿಕೃತವಾದಿಗಳು ಮತ್ತು ಬುದ್ಧಿಗೇಡಿಗಳು ಉಡುಪಿ ಚಲೋ ಚಳವಳಿ ನೆಪದಲ್ಲಿ ಕರ್ನಾಟಕದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದರು.

ಪಬ್ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಲು ಬಂದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುತಾಲಿಕ್, ಕನಕ ನಡೆಗೆ ತಮ್ಮ ಬೆಂಬಲವಿದೆ ಹಾಗೂ ರಾಜ್ಯದಲ್ಲಿ ಶಾಂತಿ ಸಾಮರಸ್ಯ ಸಾಧಿಸಲು ನಾವೆಲ್ಲರೂ ಹೋರಾಡಬೇಕು ಎಂದು ಹೇಳಿದರು.[ಮಠಕ್ಕೆ ಮುತ್ತಿಗೆ ಹಾಕಿದರೆ ಉಪವಾಸ ಮಾಡ್ತೀನಿ: ಪೇಜಾವರ ಶ್ರೀ]

Modi will built Ram mandir in Ayodhya: Muthalik

ಸೆಕ್ಯುಲರ್‌ವಾದಿಗಳು ಮುಸ್ಲಿಮರು, ಕ್ರಿಶ್ಚಿಯನ್ನರ ಏಜೆಂಟ್‌ಗಳಾಗಿದ್ದಾರೆ. ಅವರಿಗೆ ತಾಕತ್ತಿದ್ದರೆ ಮಸೀದಿಯೊಳಗಿನ ಅಸ್ಪೃಶ್ಯತೆಯನ್ನು ನಿವಾರಿಸಲು ಮಸೀದಿಯೊಳಗಡೆ ಪ್ರವೇಶಿಸಲಿ. ಉಡುಪಿ ಕೃಷ್ಣಮಠವನ್ನು ಪ್ರವೇಶಿಸಿದರೆ ಅವರು ಜೈಲಿಗೆ ಹೋಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ನವೆಂಬರ್ 10ರಂದು ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿಯನ್ನು ಕೂಡಲೇ ಕೈಬಿಡಬೇಕು. ಕಳೆದ ವರ್ಷ ಟಿಪ್ಪು ಜಯಂತಿ ಸಂದರ್ಭದಲ್ಲಿ ಅನೇಕ ಗೊಂದಲ ಸೃಷ್ಟಿಯಾಗಿತ್ತು. ಅಲ್ಲದೆ ಒಂದು ಪ್ರಾಣವು ಬಲಿಯಾಗಿದೆ. ಆದ್ದರಿಂದ ಟಿಪ್ಪು ಜಯಂತಿಯನ್ನು ಆಚರಿಸಲು ಬಿಟ್ಟರೆ ಮುಂದಿನ ದಿನಗಳಲ್ಲಿ ಬಿನ್ ಲಾಡೆನ್ ನ ಜಯಂತಿಯನ್ನೂ ಆಚರಿಸಬಹುದು ಎಂದು ಟೀಕಿಸಿದರು.[ಉಡುಪಿ ಶ್ರೀಕೃಷ್ಣ ಮಠಕ್ಕೆ ಮುತ್ತಿಗೆ ಹಾಕಿದರೆ ಸುಮ್ನೆ ಬಿಡ್ತೀವಾ?]

ಪಾಕಿಸ್ತಾನಿ ನಟರು, ಕ್ರಿಕೆಟ್ ಆಟಗಾರರಿಗೆ ಬಹಿಷ್ಕಾರ ಹಾಕಬೇಕು. ದೇಶದಲ್ಲಿ ಅವರ ಸಿನಿಮಾಗಳನ್ನು ಬಹಿಷ್ಕರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತಾರೆ, ಪಾಕಿಸ್ತಾನಕ್ಕೆ ಬುದ್ಧಿ ಕಲಿಸುತ್ತಾರೆ ಮತ್ತು ಗೋಹತ್ಯೆ ನಿಷೇಧಿಸುತ್ತಾರೆ ಎನ್ನುವ ವಿಶ್ವಾಸ ಇದೆ. ಈ ದೇಶದಲ್ಲಿ ಇರಬೇಕಾದರೆ ಎಲ್ಲರಿಗೂ ಒಂದೇ ಕಾನೂನು ಹಾಗೂ ಎಲ್ಲರೂ ಅದಕ್ಕೆ ಬದ್ಧರಾಗಿರಬೇಕು ಎಂದು ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Narendra modi will built Ram mandir in Ayodhya, Srirama sene founder Pramod Muthalik said in Mangaluru. Secularists are agents of Muslims and Christians. If they have guts should erradicate untouchability in masjid, Muthalik challenged.
Please Wait while comments are loading...