ಸ್ಟೂಡೆಂಟ್ಸ್ ಇಸ್ಲಾಮಿಕ್ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ರಫೀಕ್ ಆಯ್ಕೆ

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಡಿಸೆಂಬರ್ 14 : ರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್ ಐ ಓ) ಇದರ 2017-2018ರ ಅವಧಿಯ ಕರ್ನಾಟಕ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಮಹಮ್ಮದ್ ರಫೀಕ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಮೇಲುಸ್ತುವಾರಿ ಹಾಗೂ ಜಮಾಅತೆ ಇಸ್ಲಾಮೀ ಹಿಂದ್ ನ ಕರ್ನಾಟಕ ರಾಜ್ಯಾಧ್ಯಕ್ಷರಾದ ಮುಹಮ್ಮದ್ ಅತ್ಹರುಲ್ಲಾ ಶರೀಫ್ ಅಧ್ಯಕ್ಷತೆಯಲ್ಲಿ ನಡೆದ ಎಸ್ ಐ ಓ ನ ರಾಜ್ಯ ಸಲಹಾ ಸಮಿತಿಯ ಸದಸ್ಯರ ಸಭೆಯಲ್ಲಿ ನಡೆಸಲಾದ ಚುನಾವಣೆಯಲ್ಲಿ ಮುಹಮ್ಮದ್ ರಫೀಕ್ ರವರನ್ನು ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

Mohammed Rafiq elects-sio new-president for-2017-18-term

ಪ್ರಸ್ತುತ ಇವರು ಮಂಗಳೂರಿನ ದೇರಳಕಟ್ಟೆಯ ಪಿ.ಎ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2015-16ರ ಅವಧಿಯಲ್ಲಿ ಎಸ್ ಐ ಓ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ನೂತನ ಅಧ್ಯಕ್ಷರಾದ ಮುಹಮ್ಮದ್ ರಫೀಕ್ ಅವರು ಸರ್ ಎಂ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಎಂಟೆಕ್ ಪದವಿ ಪಡೆದಿದ್ದಾರೆ. ಈ ಸಭೆಯಲ್ಲಿ ಎಸ್ ಐ ಓ ನ ಪ್ರಸ್ತುತ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ, ಜಮಾಅತೆ ಇಸ್ಲಾಮೀ ಹಿಂದ್ ನ ಕರ್ನಾಟಕ ಕಾರ್ಯದರ್ಶಿ ಮುಹಮ್ಮದ್ ಬಿಲಾಲ್ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Mohammed Rafiq appointed as new Students Islamic Organisation of India(SIO) President of Karnataka unit for 2017-12 term.
Please Wait while comments are loading...