ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂಡಬಿದಿರೆ : ಹಿಂದೂ ಸಂಘಟನೆಯಲ್ಲಿ ತೊಡಗಿಕೊಂಡಿದ್ದಕ್ಕೆ ಪ್ರಶಾಂತ್ ಹತ್ಯೆ

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮೂಡಬಿದಿರೆ, ಅಕ್ಟೋಬರ್ 19 : ಭಾರೀ ಚರ್ಚೆಗೆ ಕಾರಣವಾಗಿದ್ದ ಮೂಡಬಿದಿರೆಯ ಭಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎರಡು ಹಲ್ಲೆ ಪ್ರಕರಣದಲ್ಲಿ ಹಿಂದೆ ಭಾಗಿಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಭಾನುವಾರ ಸಂಜೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಗರ ಪೊಲೀಸ್ ಆಯುಕ್ತ ಎಸ್.ಮುರುಗನ್ ಅವರು, ಬಂಧಿತರ ಬಗ್ಗೆ ವಿವರಣೆ ನೀಡಿದರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ಹನೀಫ್ (36), ಇಬ್ರಾಹಿಂ ಲಿಯಾಕತ್ (26), ಮಹಮ್ಮದ್ ಇಲ್ಯಾಸ್ (27), ಅಬ್ದುಲ್ ರಶೀದ್ (39) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. [ಮೂಡಬಿದಿರೆ : ಪ್ರಶಾಂತ್ ಹತ್ಯೆ]

moodbidri

ಯಾವುದೇ ಕರೆ ಬಂದಿಲ್ಲ : ಪ್ರಶಾಂತ್ ಹತ್ಯೆ ಪ್ರಕರಣದ ಪ್ರತ್ಯಕ್ಷದರ್ಶಿ ವಾಮನ ಪೂಜಾರಿ ಅವರಿಗೆ ವಿದೇಶದಿಂದ ಯಾವುದೇ ಕರೆ ಬಂದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಹೆಚ್ಚಿನ ತನಿಖೆಗೆ ಒಳಪಡಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. [ಮೂಡಬಿದಿರೆ : ಪ್ರಶಾಂತ್ ಕೊಲೆಯ ಪ್ರತ್ಯಕ್ಷದರ್ಶಿ ಸಾವು]

ಬಂಧಿತ ಮಹಮ್ಮದ್ ಹನೀಫ್ ಪ್ರಶಾಂತ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿಗಳೆಲ್ಲರೂ ಬಜ್ಪೆ, ಸುರತ್ಕಲ್, ಮಂಗಳೂರಿನ ನಿವಾಸಿಗಳಾಗಿದ್ದಾರೆ. ಇವರು ಹಂಡೇಲು ಎಂಬಲ್ಲಿ ಅಶೋಕ್ ಹಾಗೂ ವಾಸು ಅವರ ಮೇಲೆ ನಡೆದ ಹಲ್ಲೆ ಪ್ರಕರಣ ಹಾಗೂ ಜಯನಾಥ್ ಕೋಟ್ಯಾನ್ ಅವರ ಮೇಲಿನ ಹಲ್ಲೆ ಪ್ರಕರಣದಲ್ಲಿಯೂ ಆರೋಪಿಗಳಾಗಿದ್ದಾರೆ.

ಪ್ರಶಾಂತ್ ಪೂಜಾರಿ ಹಿಂದೂಪರ ಸಂಘಟನೆಯಲ್ಲಿ ಸಕ್ರಿಯನಾಗಿ ಗುರುತಿಸಿಕೊಂಡಿದ್ದರಿಂದ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಅಕ್ಟೋಬರ್ 9ರಂದು ಮೂಡಬಿದಿರೆ ಪೇಟೆಯ ಸಮಾಜಮಂದಿರ ಗೇಟ್ ಬಳಿ ಹೊಸಬೆಟ್ಟು ಗ್ರಾಮದ ನಿವಾಸಿ ಪ್ರಶಾಂತ್ (29) ಅವರನ್ನು ಹತ್ಯೆ ಮಾಡಲಾಗಿತ್ತು.

ಪ್ರಶಾಂತ್ ಹ್ಯತ್ಯೆಯ ಪ್ರತ್ಯಕ್ಷ ಸಾಕ್ಷಿಯಾಗಿದ್ದ ವಾಮನ ಪೂಜಾರಿ ಅವರು ಅಕ್ಟೋಬರ್ 15ರ ಗುರುವಾರ ಮೃತಪಟ್ಟಿದ್ದರು. 'ವಾಮನ ಪೂಜಾರಿಗೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಆದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದರು.

English summary
Mangaluru police commissioner S.Murugan on Sunday said, four arrested who murdered flower vendor and Bajrang dal activist Prashant Poojary in Moodbidri. Accused arrested are Mohammed Hanif (36), Mohammed Ilyas (27), Ibrahim Liyaqat (26), Abdul Rashid (39).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X