ಪುತ್ತೂರು: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ

Posted By:
Subscribe to Oneindia Kannada

ಮಂಗಳೂರು, ಸೆಪ್ಟೆಂಬರ್ 14: ತಾಯಿಯೊಬ್ಬಳು ತನ್ನ ಮೂರು ಕಂದಮ್ಮಗಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕುಂತೂರು ಎಂಬಲ್ಲಿ ಈ ಘಟನೆ ನಡೆದಿದೆ.

ಮೂಲತ ಸುಳ್ಯದ ಐವರ್ನಾಡು ನಿವಾಸಿಯಾದ ಹಾಗೂ ಪ್ರಸ್ತುತ ಕುಂತೂರಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿರುವ ಕಮಲಾದೇವಿ (41) ತನ್ನ ಗಂಡನ ಜತೆಗೆ ವೈಮನಸ್ಸು ಹೊಂದಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಬೇಸತ್ತು ತಾನು ಹಾಗೂ ತನ್ನ ಮೂವರು ಮಕ್ಕಳಿಗೂ ವಿಷ ಉಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Mother attempts suicide after feeding poison to her 3 children at Puttur

ಈ ವಿಚಾರ ತಿಳಿಯುತಿದ್ದಂತೆ ಸ್ಥಳೀಯರು ಅಸ್ವಸ್ಥಗೊಂಡಿದ್ದ ನಾಲ್ವರನ್ನು ಪುತ್ತೂರು ಸರಕಾರಿ ಕರೆತಂದು ಚಿಕಿತ್ಸೆ ನೀಡಿದ್ದಾರೆ.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಮಲಾದೇವಿ ಹಾಗೂ ಸುಮನಾ ಸ್ಥಿತಿ ಗಂಭೀರವಾಗಿದ್ದು, ಉಳಿದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಕಡಬ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A woman, from Ivarnadu village attempts to suicide after feeding poison to her 3 children at Puttur here on September 13. The woman is identified as Kamaladevi and she is at critical condition and the kids are said to be safe.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ