ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುತ್ತೇವೆ: ಸಂಸದ ಕಟೀಲ್

By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಜನವರಿ 1: ಹೊಸ ವರ್ಷದ ಆರಂಭದಲ್ಲೇ ಸಂಸದ ನಳೀನ್ ಕುಮಾರ್ ಕಟೀಲ್ ಆಕ್ರೋಶದ ಹೇಳಿಕೆ ನೀಡಿದ್ದಾರೆ. ಕೊಣಾಜೆಯಲ್ಲಿ ಇತ್ತೀಚೆಗೆ ನಡೆದ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲು ಸಿದ್ಧ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಉಮೇಶ್ ಗಾಣಿಗರ ಮಗ ಕಾರ್ತಿಕ್ ರಾಜ್ ಹತ್ಯೆ ಆರೋಪಿಗಳ ಪತ್ತೆಗೆ ಆಗ್ರಹಿಸಿ ಭಾನುವಾರ ಕೊಣಾಜೆ ಪೊಲೀಸ್ ಠಾಣೆ ಮುಂಭಾಗ ನಡೆದ ಪ್ರತಿಭಟನಾ ಧರಣಿಯಲ್ಲಿ ಸಂಸದ ಕಟೀಲ್ ಭಾಷಣ ಮಾಡಿದರು.[ಕಾರ್ತಿಕ್ ರಾಜ್ ಕೊಲೆ, ಜಿಹಾದಿ ಕೃತ್ಯ; ಯಡಿಯೂರಪ್ಪ]

MP Kateel urges speedy enquiry of Karthik raj murder case

ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ತಿಕ್ ರಾಜ್ ಹತ್ಯೆ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಹಲವು ದುಷ್ಕೃತ್ಯಗಳು ನಡೆಯುತ್ತಿವೆ. ಆದರೆ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಪರಾಧಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಫಲವಾಗಿರಾಗಿದ್ದಾರೆ ಎಂದು ಅವರು ಹೇಳಿದರು.

MP Kateel urges speedy enquiry of Karthik raj murder case

ಈ ಎಲ್ಲ ಕ್ರಿಮಿನಲ್ ಚಟುವಟಿಕೆಗಳಿಗೆ ಈ ಭಾಗದ ಶಾಸಕರೇ ನೇರ ಹೊಣೆ ಎಂದ ಅವರು, ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಹತ್ತು ದಿನದ ಗಡುವು ನೀಡಿದರು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಧರಣಿಗೆ ಮುಂಚೆ ಪಜೀರ್ ನಿಂದ ಕೊಣಾಜೆ ಠಾಣೆಯವರೆಗೆ ಮೌನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
MP Nalin Kumar Kateel urges to speedy enquiry of Karthik Raj murder case in Konaje, mangaluru on Sunday.
Please Wait while comments are loading...