ಮಂಗಳೂರಿನಲ್ಲಿ ರೈಲ್ವೆ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Posted By:
Subscribe to Oneindia Kannada

ಮಂಗಳೂರು, ಆಗಸ್ಟ್ 18: "ಪ್ರಧಾನಿ ನರೇಂದ್ರ ಮೋದಿಯವರ ಕನಸಿನಂತೆ ಮೇಕ್ ಇನ್ ಇಂಡಿಯಾ ಮಾದರಿಯಲ್ಲೇ ರೈಲ್ವೆ ಇಲಾಖೆಗೆ ವೇಗ ಹಾಗೂ ಸೌಲಭ್ಯಕ್ಕೆ ಆದ್ಯತೆ ನೀಡಲಾಗುವುದು. ಈ ನಿಟ್ಟಿನಲ್ಲಿ ಕರ್ನಾಟಕವನ್ನು ಫಾಸ್ಟ್ ಟ್ರ್ಯಾಕ್ ಸ್ಟೇಟ್ ಮಾಡುವ ಉದ್ದೇಶವಿದೆ," ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭಾಕರ್ ಪ್ರಭು ತಿಳಿಸಿದ್ದಾರೆ .

ಮಂಗಳೂರಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ವಿವಿಧ ಕಾಮಗಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು .

MP Nalin Kumar Lays Foundation for Doubling of Netravati-Mangaluru Central Railway

28.03 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನೇತ್ರಾವತಿ ಕ್ಯಾಬಿನ್ ನಿಂದ ಮಂಗಳೂರು ಸೆಂಟ್ರಲ್ ವರೆಗಿನ 1.5 ಕಿ.ಮೀ ಉದ್ದದ ರೈಲ್ವೇ ಹಳಿ ದ್ವಿಪಥ ಕಾಮಗಾರಿಗೆ ರೈಲ್ವೆ ಸಚಿವ ಸುರೇಶ್ ಪ್ರಭಾಕರ್ ಪ್ರಭು ಶಂಕುಸ್ಥಾಪನೆ ನೆರವೇರಿಸಿದರು.

ನಂತರ 90 ಲಕ್ಷ ರೂಪಾಯಿ ವೆಚ್ಚದಲ್ಲಿ ಪಾದಚಾರಿ ಮೇಲ್ಸೇತುವೆ ಕಾಮಗಾರಿಗೆ ಚಾಲನೆ ನೀಡಿದ ಸುರೇಶ್ ಪ್ರಭು, "ಈ ಬಾರಿ ಬಜೆಟ್ನಲ್ಲಿ ಕರ್ನಾಟಕಕ್ಕೆ 3174 ಕೋಟಿ ರೂಪಾಯಿಯ ಯೋಜನೆ ನೀಡಲಾಗಿದೆ," ಎಂದು ಹೇಳಿದರು. ಕರ್ನಾಟಕವನ್ನು ಫಾಸ್ಟ್ ಟ್ರ್ಯಾಕ್ ಸ್ಟೇಟ್ ಮಾಡುವ ನಿಟ್ಟಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು .

MP Nalin Kumar Lays Foundation for Doubling of Netravati-Mangaluru Central Railway

ನಂತರ ಮಂಗಳೂರು ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, "ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣವನ್ನು ವಿಶ್ವ ದರ್ಜೆಗೇರಿಸುವ ಪ್ರಕ್ರಿಯೆಗಳು ಆರಂಭಗೊಂಡಿದೆ," ಎಂದು ಹೇಳಿದರು.

"ವಿಶ್ವದರ್ಜೆಯ ರೈಲ್ವೆ ನಿಲ್ದಾಣವಾಗಿ ಪರಿವರ್ತಿಸಲು ಅಗತ್ಯವಿರುವ 100 ಎಕರೆ ಭೂಮಿಯ ಪೈಕಿ ಈಗಾಗಲೇ ರೈಲ್ವೆ ಇಲಾಖೆ ಅರುವತ್ತು ಎಕರೆ ಭೂಮಿ ನೀಡಿದೆ. ಉಳಿದ 40 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ನೀಡಬೇಕಾಗಿದೆ," ಎಂದು ತಿಳಿಸಿದರು .

MP Nalin Kumar Lays Foundation for Doubling of Netravati-Mangaluru Central Railway

ರಾಜ್ಯ ಸರ್ಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಅಗತ್ಯ ಭೂಮಿ ಒದಗಿಸಿದಲ್ಲಿ ಒಂದು ವರ್ಷದೊಳಗೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಅವರು ತಿಳಿಸಿದರು .

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಕವಿತಾ ಸನಿಲ್ , ಪಾಲ್ಘಾಟ್ ಡಿ.ಆರ್.ಎಂ ನರೇಶ್ ಲಾಲ್ವಾನಿ ಮತ್ತಿತರರು ಉಪಸ್ಥಿತರಿದ್ದರು .

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The foundation stone laying ceremony for doubling of the Netravati- Mangaluru Central Railway section and the foot over bridge at the Mangaluru Central Railway Station on August 18.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ