ಕಲ್ಲಡ್ಕದಲ್ಲಿ ಕೊಲೆ ಯತ್ನ, ಜಲೀಲ್ ಕರೋಪಾಡಿ ಕೊಲೆಗೆ ಪ್ರತೀಕಾರದ ಶಂಕೆ

Posted By: ಮಂಗಳೂರು ಪ್ರತಿನಿಧಿ
Subscribe to Oneindia Kannada

ಮಂಗಳೂರು, ಡಿಸೆಂಬರ್ 26 : ಕಲ್ಲಡ್ಕದಲ್ಲಿ ಕೊಲೆಗಾಗಿ ಇಬ್ಬರು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಕೇಶವ ವೀರಕಂಭ ಎಂಬುವವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಆರೋಪಿಗಳು, ಆವರನ್ನು ಹತ್ಯೆ ಮಾಡಲು ಪ್ರಯತ್ನಿಸಿದ್ದಾರೆ. ಈ ಕೃತ್ಯ ಮಂಗಳವಾರ ಕಲ್ಲಡ್ಕದಲ್ಲಿ ನಡೆದಿದೆ.

ಮಂಗಳೂರಿನ ಅಡ್ಯಾರ್ ಚೂರಿ ಇರಿತ ಪ್ರಕರಣದಲ್ಲಿ ಮೂವರ ಬಂಧನ

ಜಲೀಲ್ ಕರೋಪಾಡಿ ಹತ್ಯೆ ಪ್ರಕರಣದ ಆರೋಪ ‌ಕೇಶವ ವೀರಕಂಭ ಮೇಲಿದೆ. ಬೈಕ್ ನಲ್ಲಿ‌ ಬಂದ ಮುಸುಕುಧಾರಿಗಳು ಈ ಕೃತ್ಯ ಎಸಗಿದ್ದಾರೆ. ಕೇಶವ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.

Murder attempt in Kalladka, tighten police security

ಕೊಲೆ ಯತ್ನದ ಹಿನ್ನೆಲೆಯಲ್ಲಿ ಕಲ್ಲಡ್ಕದಲ್ಲಿ ಬಂದ್ ವಾತಾವರಣ ಇದೆ. ಕಲ್ಲಡ್ಕದಾದಂತ್ಯ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಜಲೀಲ್ ಕರೋಪಾಡಿ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಯತ್ನ ನಡೆಸಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. 2017ರ ಏಪ್ರಿಲ್ 20ರಂದು ಜಲೀಲ್ ಕರೋಪಾಡಿ ಕೊಲೆಯು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ನಡೆದಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Murder attempt in Kalladka, Bantwal taluk, Dakshina Kannada district on Tuesday. Police tighten the security.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ